ಮಾರುಕಟ್ಟೆಯ ಮಾಹಿತಿ ಪ್ರಕಾರ, ಚರ್ಮವಿಲ್ಲದ ಬಾಯ್ಲರ್ ಚಿಕನ್ ಪ್ರತಿ ಕೆಜಿಗೆ 360 ರೂಪಾಯಿ ಹಾಗೂ ಚರ್ಮ ಸಮೇತ ಚಿಕನ್ ಪ್ರತಿ ಕೆಜಿಗೆ 340 ರೂಪಾಯಿಗೆ ಮಾರಾಟವಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ 300 ರೂಪಾಯಿ ಆಸುಪಾಸಿನಲ್ಲಿದ್ದ ಚಿಕನ್ ಬೆಲೆ ಈಗ 350ರಿಂದ 360 ರೂಪಾಯಿವರೆಗೆ ಏರಿಕೆಯಾಗಿದೆ.
ಮೊಟ್ಟೆ ದರವೂ ಇದೇ ರೀತಿ ಏರಿಕೆ ಕಂಡಿದೆ. ಸಗಟು ಮಾರುಕಟ್ಟೆಯಲ್ಲಿ ಒಂದು ಮೊಟ್ಟೆ 8 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ 8.30 ರಿಂದ 9 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಮೂರು ದಿನಗಳ ಹಿಂದಷ್ಟೇ 7ರಿಂದ 7.50 ರೂಪಾಯಿ ಇದ್ದ ಮೊಟ್ಟೆ ಬೆಲೆ ಈಗ 9 ರೂಪಾಯಿಗೆ ತಲುಪಿರುವುದು ಗ್ರಾಹಕರಿಗೆ ಹೆಚ್ಚುವರಿ ಹೊರೆ ತಂದಿದೆ.
ವ್ಯಾಪಾರಿಗಳ ಪ್ರಕಾರ, ಈ ಬಾರಿ ಕೋಳಿಗಳ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಹಾಗೂ ಬೇರೆ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕೋಳಿ ಪೂರೈಕೆಯಾಗುತ್ತಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಪೂರೈಕೆ ಕಡಿಮೆಯಾಗಿದೆ. ಇದರಿಂದ ಚಿಕನ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ಅವರು ಹೇಳುತ್ತಾರೆ.
ಬೆಲೆ ಏರಿಕೆಯ ಪರಿಣಾಮ ಗ್ರಾಹಕರ ಖರೀದಿ ಪ್ರಮಾಣದಲ್ಲೂ ಬದಲಾವಣೆ ಕಂಡುಬಂದಿದೆ. ಈ ಹಿಂದೆ ಒಂದು ಕೆಜಿ ಚಿಕನ್ ಖರೀದಿಸುತ್ತಿದ್ದವರು ಈಗ 500 ಅಥವಾ 750 ಗ್ರಾಂ ಮಾತ್ರ ಖರೀದಿಸುತ್ತಿದ್ದಾರೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಹೆಚ್ಚಿದ ದರದ ಕಾರಣ ಗ್ರಾಹಕರ ಸಂಖ್ಯೆ ಕೂಡ ಕಡಿಮೆಯಾಗಿದೆ ಎನ್ನಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…