Featured

ಚಿಕನ್ ಕಬಾಬ್‌ ಗೆ ಕೃತಕ ಬಣ್ಣ ಬಳಕೆಗೆ ರಾಜ್ಯ ಸರ್ಕಾರ ನಿಷೇಧ – vishwanews24

ಫಿಶ್ ಹಾಗೂ ಚಿಕನ್ ಕಬಾಬ್‌ ಗೆ ಕೃತಕ ಬಣ್ಣ ಬಳಕೆಗೆ ಸರ್ಕಾರ ನಿಷೇಧ- ಉಲ್ಲಂಘಿಸಿದರೆ ಜೀವಾವಧಿ ಶಿಕ್ಷೆ

ಬೆಂಗಳೂರು: ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ಯಾನ್ ಹೇರಿದ ಬೆನ್ನಲ್ಲೇ ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಸದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಆಹಾರ ಸುರಕ್ಷತೆ ವಿಚಾರದಲ್ಲಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.

ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು. ಕಳಪೆ ಗುಣಮಟ್ಟದ ಆಹಾರ ಸೇವನೆ ಇತ್ತಿಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟು ಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago