Featured

ಚಿಕಿತ್ಸೆ ಫಲಿಸದೇ ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ನಿಧನ  – Vishwanews24

BREAKING NEWS :ಚಿಕಿತ್ಸೆ ಫಲಿಸದೇ ಮಾಜಿ IAS ಅಧಿಕಾರಿ, ನಟ ಕೆ.ಶಿವರಾಮ್ ನಿಧನ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಈ ಕುರಿತಂತೆ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ಅವರು ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡು, ಮಾಹಿತಿ ಹಂಚಿಕೊಂಡಿದ್ದಾರೆ. ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್ ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದಾರೆ. ಹೆ಼ಚ್. ಸಿ. ಜಿ ಆಸ್ಪತ್ರೆಯಲ್ಲಿದ್ದಾರೆ ಎಂದರು. ಕೂಡಲೇ ನನ್ನ ಹಿರಿಯಣ್ಣ ಡಾ. ಸ್ವಾಮಿ ಅವರಿಗೆ ಫೋನ್ ಮಾಡಿದೆ. ಅವರ ವೈಧ್ಯಕೀಯ ಭಾಷೆ ನನಗೆ ಅರ್ಥವಾಯಿತು. ವೆಂಕಟೇಶ್ ಅವರಿಗೆ ಹೋಪ್ಸ್ ಇಲ್ಲವೆಂದು ಹೇಳಿದೆ. ಇಂದು ಬೆಳಿಗ್ಗೆ ಅವರು ಇನ್ನಿಲ್ಲವೆಂಬ ಸುದ್ಧಿ ಹೊರಬಿದ್ದಿದೆ. ಕೇವಲ ಹತ್ತನ್ನೆರಡು ಗಂಟೆಗಳ ಹಿಂದಿನ ಸೀರಿಯಸ್ ಎಂಬ ಸುದ್ದಿ ಮಲಗಿ ಏಳುವಷ್ಟರಲ್ಲಿ ‘ಇನ್ನಿಲ್ಲ’ ಎಂದಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago