Featured

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ – vishwanews24

ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿತ್ತು. ದುರ್ಘಟನೆಯಲ್ಲಿ ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಎಂಬುವವರು ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

 

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

25 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

36 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

41 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

48 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago