ಬೆಂಗಳೂರು : ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
“ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುವೆ” ಎಂದು ಅವರು ಬರೆದು ಕೊಂಡಿದ್ದಾರೆ.
ಸಿದ್ದರಾಮಯಯ್ಯ ತಮ್ಮ ಟ್ವೀಟ್ ನಲ್ಲಿ ರಾಜ್ಯ ಸರ್ಕಾರವನ್ನು ಆರೋಪಿಸಿದ್ದು, ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಶಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಅವರು ಪ್ರಶ್ನಿಸಿದ್ದಾರೆ.
“ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರುಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪನವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ” ಎಂದು ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ಪ್ರಧಾನಿ ಮೋದಿ ಸಂತಾಪ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…