Featured

ಚಿಕ್ಕಮಗಳೂರಿನಲ್ಲಿ ಇಂದು ಸಿದ್ಧಾರ್ಥ್ ಅಂತ್ಯಕ್ರಿಯೆ -Vishwanews24

ಮಂಗಳೂರು:ನಾಪತ್ತೆಯಾಗಿದ್ದ ಕಾಫಿ ಡೇ ಮಾಲೀಕ ವಿಜಿ ಸಿದ್ದಾರ್ಥ ಅವರ ಮೃತದೇಹ ಇಂದೇ ಕೆಫೆ ಕಾಫಿ ಡೇ ಮಾಲೀಕ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ಧಾರ್ಥ್ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.

ಸೋಮವಾರ ಸಂಜೆ ನೇತ್ರಾವತಿ ಸೇತುವೆ ಬಳಿ ಕಾಣೆಯಾಗಿದ್ದ ಸಿದ್ಧಾರ್ಥ ಅವರು ಇಂದು ಬೆಳಿಗ್ಗೆ ಮೃತ ಸ್ಥಿತಿಯಲ್ಲಿ ಮಂಗಳೂರಿನ ಹೊಯಿಗೆ ಬಜಾರ್ ಎಂಬಲ್ಲಿ ಪತ್ತೆಯಾಗಿದ್ದಾರೆ.

ಸಿದ್ಧಾರ್ಥ ಅವರ ಮೃತದೇಹವನ್ನು ಪರೀಕ್ಷೆಗಾಗಿ ವೆನ್‌ಲಾಕ್‌ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು 10 ಗಂಟೆ ವೇಳೆಗೆ ವೆನ್‌ಲಾಕ್‌ ನಿಂದ ಆಂಬುಲೆನ್ಸ್‌ ಮುಖಾಂತರ ಸಿದ್ದಾರ್ಥ ಅವರ ಮೃತದೇಹವನ್ನು ಚಿಕ್ಕಮಗಳೂರಿಗೆ ತೆಗೆದುಕೊಂಡು ಹೋಗಲಾಗುತ್ತದೆ.

ಆಂಬುಲೆನ್ಸ್‌ ಮುಖಾಂತರ ಸಿದ್ದಾರ್ಥ ಅವರ ಮೃತದೇಹವನ್ನು ಚಿಕ್ಕಮಗಳೂರಿಗೆ ರವಾನೆ ಮಾಡಲಾಗುತ್ತಿದ್ದು, 150 ಕಿ.ಮೀ ಹಾದಿಯನ್ನು 3 ಗಂಟೆ ಒಳಗೆ ತಲುಪುವ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ. ಬಿ.ಸಿ ರೋಡು, ಬೆಳ್ತಂಗಡಿ ಮಾರ್ಗ ಚಾರ್ಮಾಡಿ ಘಾಟ್ ಮೂಲಕ ಚಿಕ್ಕಮಗಳೂರು ತಲುಪಲಿದೆ.

ಮಧ್ಯಾಹ್ನ 1 ಗಂಟೆ ವೇಳೆಗೆ ಮೂಡಗೆರೆಯ ಎಬಿಸಿ ಕಾಫಿ ಕ್ಯೂರಿಂಗ್ ಆವರಣದಲ್ಲಿ ಕೆಲ ಸಮಯ ಅಂತಿಮದರ್ಶನಕ್ಕೆ ಇಡಲಾಗುತ್ತದೆ. ಅಂತಿಮ ದರ್ಶನದ ನಂತರ ಸಿದ್ಧಾರ್ಥ ಅವರ ಚೇತನಹಳ್ಳಿ ಎಸ್ಟೇಟ್‌ನಲ್ಲಿ ಅಂತಿಮಕಾರ್ಯ ಮಾಡಲಾಗುತ್ತದೆ.

ಅಂತಿಮ ಕಾರ್ಯದಲ್ಲಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ದೇವೇಗೌಡ, ಡಿ.ಕೆ.ಶಿವಕುಮಾರ್ ಇನ್ನೂ ಹಲವು ಪ್ರಮುಖ ನಾಯಕರು, ಪ್ರಮುಖ ಉದ್ಯಮಿಗಳು, ಸಹಸ್ರಾರು ಸಂಖ್ಯೆಯ ಅಭಿಮಾನಿಗಳು, ಕಾಫಿ ಡೇ, ಮೈಂಡ್ ಟ್ರೀ ಉದ್ಯೋಗಿಗಳು ಭಾಗಿಯಾಗುವ ನಿರೀಕ್ಷೆ ಇದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago