Featured

ಚಿಕ್ಕಮಗಳೂರು : ಅಕ್ರಮ ಗೋಮಾಂಸ ಮಾರಾಟ ಮಾಡುವವರಿಗೆ ನೋಟಿಸ್‌ ಜಾರಿ ; ಗೋ ಹತ್ಯೆ ಮಾಡಿದ್ರೆ ಕಟ್ಟಡ ನೆಲಸಮ ಮಾಡುವ ಎಚ್ಚರಿಕೆ – Vishwnaews24

ಚಿಕ್ಕಮಗಳೂರು : ಅಕ್ರಮ ಗೋಮಾಂಸ ಮಾರಾಟ ಮಾಡುವವರಿಗೆ ನೋಟಿಸ್‌ ಜಾರಿ ; ಗೋ ಹತ್ಯೆ ಮಾಡಿದ್ರೆ ಕಟ್ಟಡ ನೆಲಸಮ ಮಾಡುವ ಎಚ್ಚರಿಕೆ

ಚಿಕ್ಕಮಗಳೂರು : ಗಲಭೆಕೋರರ ಮನೆಗಳನ್ನು ಬುಲ್ಡೋಜರ್‌ ಬಳಸಿ ನೆಲಸಮ ಮಾಡಿರುವ ಉತ್ತರ ಪ್ರದೇಶ ಸರಕಾರದ ಕ್ರಮ ದೇಶದಾದ್ಯಂತ ಸುದ್ದಿಯಾಗುತ್ತಿದೆ. ಇದೀಗ ಇಂತಹದ್ದೇ ಪ್ರಯೋಗಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸ್ವಕ್ಷೇತ್ರ ಕಾಫಿನಾಡು ಚಿಕ್ಕಮಗಳೂರು ಸಜ್ಜಾಗಿದೆ. ಅಕ್ರಮವಾಗಿ ಗೋಮಾಂಸ ಮಾರಾಟ (illegal beef sellers) ಮಾಡುವವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಚಿಕ್ಕಮಗಳೂರು ನಗರ ಸಭೆ ಅಧಿಕಾರಿಗಳು ಅಕ್ರಮ ಗೋಮಾಂಸ ಮಾರಾಟದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ ಗೋಮಾಂಸ ಮಾರಾಟ ಮಾಡುವ ಮನೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಸ್ಫೋಟಕ, ಮಾದಕ ವಸ್ತು ಸೇರಿದಂತೆ ಗೋ ಹತ್ಯೆ ಮಾಡಿದ್ರೆ ಕಟ್ಟಡವನ್ನೇ ನೆಲಸಮ ಮಾಡುವ ಎಚ್ಚರಿಕೆಯನ್ನು ನೀಡಲಾಗಿದೆ.

ನಗರಸಭೆ ಅಧಿಕಾರಿಗಳು ಈಗಾಗಲೇ 10ಕ್ಕೂ ಅಧಿಕ ಮನೆ, ಅಂಗಡಿಗಳಿಗೆ ನೋಟಿಸ್‌ ಅಂಟಿಸಿದ್ದಾರೆ. ಕಳೆದ ವಾರವಷ್ಟೇ ಗೋಮಾಂಸ ಅಡ್ಡೆಗಳ ಮೇಲೆ ನಗರಸಭೆಯ ಅಧಿಕಾರಿಗಳು ದಾಳಿ ನಡೆಸಿ, ಜೆಸಿಬಿ ಮೂಲಕ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಿತ್ತು. ಇದೀಗ ಮತ್ತೆ ಅಕ್ರಮ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಳು ನೋಟಿಸ್‌ ಅಂಟಿಸಿದ್ದಾರೆ. ನಗರಸಭೆ ನೋಟಿಸ್‌ ಅಂಟಿಸಿರುವುದು ಅಕ್ರಮ ಗೋ ಮಾಂಸ ಮಾಡುವವರಿಗೆ ನಡುಕ ಶುರುವಾಗಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಾದಿಯಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸ್ವಕ್ಷೇತ್ರದ ಅಧಿಕಾರಿ ಸಾಗಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

13 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

13 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

13 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

14 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago