Featured

ಚಿಕ್ಕಮಗಳೂರು: ಅಪರೂಪದ ಜಾತ್ರೆ – ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ – Vishwanews24

ಚಿಕ್ಕಮಗಳೂರು: ಅಪರೂಪದ ಜಾತ್ರೆ ವಿಸ್ಮಯ – ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಬೃಹತ್ ಹುತ್ತ

ಚಿಕ್ಕಮಗಳೂರು: ಮಹಾಮಂಗಳಾರತಿ ವೇಳೆ ಸುಮಾರು 16 ಅಡಿ ಎತ್ತರದ ಮಣ್ಣಿನ ಹುತ್ತವೊಂದು  10 ರಿಂದ 15 ಡಿಗ್ರಿ ಅಲುಗಾಡುವ ಮೂಲಕ ನೋಡುಗರಲ್ಲಿ ಆಶ್ಚರ್ಯ ಮೂಡಿಸಿ, ಭಕ್ತರನ್ನು ಮಂತ್ರಮುಗ್ಧರನ್ನಾಗಿಸುವಂತಹ ಅಪರೂಪದ ಜಾತ್ರೆಯೊಂದು ಜಿಲ್ಲೆಯ ಮೂಡಿಗೆರೆ  ತಾಲೂಕಿನ ಬಣಕಲ್ ಸಮೀಪದ ಬಾನಹಳ್ಳಿಯಲ್ಲಿ ಶತಮಾನಗಳಿಂದ ಸದ್ದಿಲ್ಲದೆ ನಡೆಯುತ್ತಿದೆ.

ಶತಮಾನಗಳಿಂದ ಆ ಹುತ್ತಕ್ಕೆ ಸೂರಿಲ್ಲ. ತಡೆಗೋಡೆಗಳಿಲ್ಲ. ಆದರೂ ಮಳೆ-ಗಾಳಿಗೆ ಒಂದಿಂಚು ಕರಗಿಲ್ಲ. ಹುತ್ತದ ಸುತ್ತಲೂ ಕಲ್ಲು-ಸಿಮೆಂಟ್‍ಗಳಿಂದ ಬಂದೋಬಸ್ತ್ ಮಾಡಿದ್ದರೂ ಕೂಡ ದೀಪಾವಳಿ (Deepavali) ಅಮಾವಸ್ಯೆಯ ನಂತರ ಮಕ್ಕಳ ಹುಣ್ಣೆಮೆಯ ದಿನ ಮಹಾಮಂಗಳಾರತಿ ವೇಳೆ ಇಲ್ಲಿ ನಡೆಯುವ ವಿಚಿತ್ರವನ್ನು ಕಂಡು ನಾಸ್ತಿಕರೂ ಕೂಡ ಆಸ್ತಿಕರಾಗುತ್ತಿದ್ದಾರೆ. ಇದನ್ನೂ ಓದಿ:  ಕಾಪು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡಪಾನರರಿಗೆ ಹೊಸ ಮಾರಿಗುಡಿಯಿಂದ ಚಿತ್ರನಟಿ ಜಯಪ್ರಧಾ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮ

ಸುಮಾರು ನಾಲ್ಕು ಶತಮಾನಗಳ ಹಿಂದೆ ದನ ಕಾಯುವ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಹೊಯ್ಸಳರ ಕಾಲದಿಂದಲೂ ನಡೆದು ಬರುತ್ತಿರುವ ಇಲ್ಲಿನ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯ ನಂತರದ ಮಕ್ಕಳ ಹುಣ್ಣೆಮೆಯಂದು ನಡೆಯುವ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಈ ಹುತ್ತಾ ಸುಮಾರು 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತದೆ. ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿಯ ಗುಡಿ. 400 ವರ್ಷಗಳ ಹಿಂದೆ, ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರ ಬೆಳೆದಿದೆ. ಈ ಹುತ್ತಕ್ಕೆ ಸೂರಿಲ್ಲ. ಮಳೆ-ಗಾಳಿಗೆ ಕರಗಿಲ್ಲ. ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಈ ಪವಾಡವನ್ನು ನೋಡಲೆಂದು ಬಂದವರು ನಾಗಪ್ಪನ ಭಕ್ತರಾಗಿ ಪ್ರತಿ ವರ್ಷ ಈ ಉಣ್ಣಕ್ಕಿ ಉತ್ಸವಕ್ಕೆ ಬರುತ್ತಿದ್ದಾರೆ.

ಉತ್ಸವದಂದು ಯಾವುದೇ ಗಾಯವಾಗದ ಕರುವಿನ ಕಿವಿಯನ್ನು ಕತ್ತರಿಸಿ ದೇವರ ಕರುವೆಂದು ಕಾಡಿಗೆ ಬಿಡುವ ವಾಡಿಕೆ ಇಂದಿಗೂ ಜೀವಂತವಿದೆ. ಇದರಿಂದ ಊರಿನ ದನಕರುಗಳು ಆರೋಗ್ಯದಿಂದ ಇದ್ದು ಯಾವುದೇ ಅನಾಹುತಗಳು ನಡೆಯುವುದಿಲ್ಲ ಎಂಬುವುದು ನಂಬಿಕೆ. ದನ ಕಾಯುವ ಹುಡುಗರು ಕಟ್ಟಿದ ಹುತ್ತವಾದ್ದರಿಂದ ಕರುವನ್ನು ಕಾಡಿಗೆ ಹೊಡೆಯೋ ಆಚರಣೆ ಬೆಳೆದು ಬಂದಿದೆ. ಉತ್ಸವದ ದಿನ ಕರುವನ್ನು ಹುತ್ತಕ್ಕೆ ಸುತ್ತಿಸುವ ವೇಳೆ ಕರುವಿನ ಮೇಲೆ ಮಂಡಕ್ಕಿ (ಪುರಿ) ಹಾಕುತ್ತೇವೆ ಎಂದು ಹರಕೆ ಕಟ್ಟಿಕೊಳ್ಳುತ್ತಾರೆ. ಇಲ್ಲಿ ಹರಕೆ ಕಟ್ಟಿಕೊಂಡರೆ ಎಂತಹಾ ಕಷ್ಟವೂ ಕಳೆಯುತ್ತದೆ ಎಂಬುವುದು ಭಕ್ತರ ನಂಬಿಕೆ. ಪ್ರತಿವರ್ಷ ದೀಪಾವಳಿಯ ನಂತರದ ಮಕ್ಕಳ ಹುಣ್ಣಿಮೆಯ ಗುರುವಾರ ಅಥವಾ ಭಾನುವಾರ ಈ ಉತ್ಸವ ನಡೆಯಲಿದೆ. ಚರ್ಮರೋಗ, ಮಕ್ಕಳಾಗದವರು, ದನಕರು ಸಾಯುತ್ತಿದ್ದರೆ ಅಥವಾ ಆಗಾಗ್ಗೆ ಆರೋಗ್ಯ ಹದಗೆಡುತ್ತಿದ್ದರೆ ಇಲ್ಲಿಗೆ ಹರಕೆ ಕಟ್ಟಿಕೊಂಡರೆ ಸಾಕು ವರ್ಷದೊಳಗೆ ಆ ಹರಕೆ ಈಡೇರುತ್ತದೆ ಎನ್ನಲಾಗುತ್ತದೆ. ಹಾಗಾಗಿ, ಸುತ್ತಮುತ್ತಲಿನ ಜಿಲ್ಲೆಯ ಜನರು ಈ ನಾಗಪ್ಪನ ಮಾಯೆಗೆ ಬೆರಗಾಗಿದ್ದಾರೆ. ಇದನ್ನೂ ಓದಿ:ಮಂಗಳೂರು: ವೈದ್ಯಕೀಯ ವಿದ್ಯಾರ್ಥಿ ಸಾವು ಪ್ರಕರಣ..ಸಿಬಿಐ ತನಿಖೆಗೆ ಸುಪ್ರೀಂ ಆದೇಶ – Vishwanews24

ತರ್ಕಕ್ಕೆ ನಿಲುಕದ ಈ ಗ್ರಾಮದ ಉತ್ಸವ ಇಂದಿಗೂ ಪ್ರಶ್ನಾತೀತ. ಹುತ್ತ ಅಲುಗಾಡುವುದರ ಹಿಂದೆ ವೈಜ್ಞಾನಿಕ ಕಾರಣವಿದೆಯೋ ಅಥವಾ ದೈವಿಶಕ್ತಿಯ ಪ್ರಭಾವವಿದೆಯೋ ಎಂಬುವುದು ಇಂದಿಗೂ ನಿಗೂಢ. ದನ ಕಾಯುವ ಹುಡುಗರ ಭಕ್ತಿಯಿಂದಾಗಿ ಈ ಹುತ್ತಾ ಅಲುಗಾಡುತ್ತಾ ಪವಾಡವನ್ನೇ ಸೃಷ್ಟಿಸಿದ್ದರೆ, ಹುತ್ತ ಅಲುಗಾಡುವುದರ ಬಗ್ಗೆ ಆಸ್ತಿಕ ಹಾಗೂ ನಾಸ್ತಿಕರಲ್ಲಿ ಹಲವು ವಾದ-ವಿವಾದಗಳು ಇವೆ. ಆದರೆ, ನೋಡುಗರ ಕಣ್ಮುಂದೆ ನಡೆಯುವ ಈ ವಿಚಿತ್ರ ಹಾಗೂ ವಿಶಿಷ್ಠ ಪವಾಡ ಮಾತ್ರ ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿದೆ. ಭೂಗರ್ಭದ ಒಡಲಾಳದಲ್ಲಿ ಅಡಗಿರುವ ಒದೊಂದು ಸತ್ಯ ಹೊರಬಂದಾಗಲೂ ದೇವರಿರುವುದು ಸತ್ಯ ಎನಿಸುತ್ತದೆ. ಜನ ಅದನ್ನು ನಂಬಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago