Featured

ಚಿಕ್ಕಮಗಳೂರು : ಏ. 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್​​ಗೆ ಅವಕಾಶ ನೀಡದಂತೆ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ – Vishwanews24

ಏ. 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್​​ಗೆ ಅವಕಾಶ ನೀಡದಂತೆ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಏಪ್ರಿಲ್ 26ರಂದು ಮತದಾನ ನಡೆಯಲಿರುವ ಕಾರಣ ಏ. 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್​​ಗೆ ಅವಕಾಶ ನೀಡದಂತೆ ಚಿಕ್ಕಮಗಳೂರು ಜಿಲ್ಲೆಯ ಹೋಂ ಸ್ಟೇ, ರೇಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಮತದಾನದ ದಿನ ರಜೆಯಿರುವ ಕಾರಣ ವಾರಾಂತ್ಯದ ರಜೆಯ ಉಪಯೋಗ ಪಡೆದು ಜನರು ಪ್ರವಾಸಕ್ಕೆ ತೆರಳಿದರೆ ಮತದಾನ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಮತದಾನ ಪ್ರಮಾಣ ಹೆಚ್ಚಿಸಲು ಈ ಮೂಲಕ ನೆರವಾಗಬೇಕು ಎಂದು ಹೋಂ ಸ್ಟೇ, ರೇಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಚಿಕ್ಕಮಗಳೂರಿಗೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವ ಹಿನ್ನೆಲೆ ಮತದಾನ ಪ್ರಕ್ರಿಯೆಯಿಂದ ಮತದಾರ ಹೊರಗುಳಿಯಬಾರದೆಂಬ ಉದ್ದೇಶದಿಂದ ಈ ಸೂಚನೆ ನೀಡಲಾಗಿದ್ದು, ಅತಿ ಹೆಚ್ಚು ಮತದಾನ ನಡೆಸೋ ಉದ್ದೇಶದಿಂದ ಬುಕ್ಕಿಂಗ್ ಕ್ಯಾನ್ಸಲ್ ಗೆ ಮನವಿ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಹೋಂ ಸ್ಟೆ ಹಾಗೂ ರೇಸಾರ್ಟ್ ಮಾಲೀಕರಿಗೆ ಲಿಖಿತವಾಗಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

21 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

22 hours ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

2 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

2 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

2 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

2 days ago