ಮಂಗಳೂರು: ಚಿಕ್ಕಮಗಳೂರಿನಲ್ಲಿ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು. ಪೀಡಿತ ಹೆಣ್ಣುಮಗಳು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಮಾಹಿತಿ ಲಭ್ಯವಾಗಿದ್ದು, ಅದರ ಅನ್ವಯ ಪ್ರಕರಣವನ್ನು ಪಿಸಿಆರ್ ಕಾಯ್ದೆಯಡಿ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ :
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಅವರು ಯಾಕೆ ಹೋಗುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಸ್ವಂತ ಹಣದಲ್ಲಿ ಅವರು ಎಲ್ಲಿಗೆ ಬೇಕಾದರೂ ಹೋಗಬಹುದು. ಆಸ್ಟ್ರೇಲಿಯಾ ಸೇರಿದಂತೆ ಎಲ್ಲೆಡೆ ಕೃಷಿ ಇದೆ. ಬಜೆಟ್ ತಯಾರಿಸುವುದು ಮುಖ್ಯಮಂತ್ರಿ ಮತ್ತು ಹಣಕಾಸು ಇಲಾಖೆಯ ಕೆಲಸ. ಸಿಎಲ್‌ಪಿ ಸಭೆಯಲ್ಲಿ ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅದನ್ನೆಲ್ಲಾ ಕ್ರೋಡೀಕರಿಸಿ ಬಜೆಟ್ ಸಿದ್ಧಪಡಿಸಲಾಗುತ್ತದೆ. ಶಾಸಕರು ಎಲ್ಲಿ ಬೇಕಾದರೂ ಹೋಗಬಹುದು, ಬರಬಹುದು. ನಮ್ಮಲ್ಲಿ ಯಾವುದೇ ಕದನವಿಲ್ಲ,” ಎಂದು ಹೇಳಿದರು.
ಆರ್‌ಎಸ್‌ಎಸ್ ಕುರಿತು ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅದು ಅವರ ವೈಯಕ್ತಿಕ ಅಭಿಪ್ರಾಯ. ಆರ್‌ಎಸ್‌ಎಸ್ ಬಗ್ಗೆ ಅವರಿಗೆ ಅವರದೇ ಆದ ಅಭಿಪ್ರಾಯವಿದೆ. ಅದಕ್ಕೆ ನನ್ನ ಹೇಳಿಕೆ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ :
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…