ಚಿಕ್ಕಮಗಳೂರು: ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ ತಾಲೂಕಿನ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ನಡೆದಿದೆ.
ಮಂಗಳವಾರ ಸಂಜೆ ಕಾಡಿಗೆ ಬೆಂಕಿ ಹಬ್ಬಿದ್ದು ನೋಡನೋಡ್ತಿದ್ದಂತೆ ಅರಣ್ಯ ಹೊತ್ತಿ ಉರಿದಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರೂ ಗಾಳಿಗೆ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚುತ್ತಲೇ ಇತ್ತು.
ಕಳಸ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಮುಗಿಲೆತ್ತರದ ಬೆಟ್ಟಗುಡ್ಡಗಳಲ್ಲಿ ಬೆಂಕಿ ಬಿದ್ದ ಪರಿಣಾಮ ಗಾಳಿಯ ವೇಗಕ್ಕೆ ಬೆಂಕಿ ಒಂದು ಗುಡ್ಡದಿಂದ ಮತ್ತೊಂದು ಗುಡ್ಡಕ್ಕೆ ಹಬ್ಬಿದ್ದು ಅರಣ್ಯ ಇಲಾಖೆಗೆ ಬೆಂಕಿ ನಂದಿಸುವುದು ಸವಾಲಾಗಿತ್ತು.
ಕೊನೆಗೂ ಅರಣ್ಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಜೊತೆ ಸಸ್ಯಸಂಪತ್ತು ನಾಶವಾಗಿರುವ ಜೊತೆಗೆ ಪ್ರಾಣಿ-ಪಕ್ಷಿಗಳು ಕೂಡ ಸುಟ್ಟುಕರಕಲಾಗಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…