ಚಿಕ್ಕಮಗಳೂರು : ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ನಡೆದಿದೆ.
ಮೃತರನ್ನ ರಾಜಶೇಖರ್ ಹಾಗೂ ಮಣಿಕಂಠ ಎಂದು ಗುರುತಿಸಲಾಗಿದೆ. ಕೊಪ್ಪದ ಗುಣವಂತೆ ಮೆಡಿಕಲ್ ಸ್ಟೋರಿನ ಮಾಲೀಕರಾದ ರಾಜಶೇಖರ್ ಹಾಗೂ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನ ಮಣಿಕಂಠ ಮೃತರಾಗಿದ್ದಾರೆ. ಕೆಲಸದ ನಿಮಿತ್ತ ಶಿವಮೊಗ್ಗ ಜಿಲ್ಲೆಯ ಆಗುಂಬೆಗೆ ಹೋಗಿ ವಾಪಸ್ ಕೊಪ್ಪಕ್ಕೆ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸದೆ.
ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗೊಜ್ಜಾಗಿದೆ. ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹರಿಹರಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…