ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿಕೊಂಡಿದ್ದಾರೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ ಅನ್ನೋವಂತಾಗಿದೆ. ಜಾರುವ ಬಂಡೆಗಳ ಮೇಲೆ ಹತ್ತಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದಾರೆ.
ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಮಾಡ್ಕೊಂಡು ಟೂರಿಸ್ಟ್ ಗಳು ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದಾರೆ. ಕೆಲ ಪ್ರವಾಸಿಗರಿಗೆ ಟ್ರಾಫಿಕ್ ಜಾಮ್ ಮಾಡ್ಕೊಂಡು ರಸ್ತೆ ಮಧ್ಯೆ ಟಿಕ್‍ಟಾಕ್ ಮಾಡೋ ಶೋಕಿಯಾದ್ರೆ, ಇನ್ನೂ ಕೆಲವರು ಜಾರು ಬಂಡೆಗಳ ಮೇಲೆ ಹತ್ತಿ ಫೋಟೋಗೆ ಪೋಸ್ ಕೊಡುತ್ತಿದ್ದಾರೆ.
ಸ್ವಲ್ಪ ಯಾಮಾರಿ ಜಾರಿ ಬಿದ್ದರೂ ಕೈ-ಕಾಲುಗಳಿಗೆ ಗಾಯಗಳಾಗುವ ಸಾಧ್ಯತೆಗಳಿವೆ. ಈ ಹಿಂದೆ ಬಿದ್ದು ಕೈ-ಕಾಲು ಮುರ್ಕೊಂಡು, ತಲೆ ಹೊಡೆದುಕೊಂಡಿರುವ ಹಾಗೂ ಪ್ರಾಣವೂ ಹೋದ ಉದಾಹರಣೆಗಳು ಸಾಕಷ್ಟಿವೆ. ರಸ್ತೆ ಮಧ್ಯೆ ಯುವಕ-ಯುವತಿಯ ಮೋಜು-ಮಸ್ತಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…