ಚಿಕ್ಕಮಗಳೂರು : ಕೆಎಸ್ಆರ್ ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಘಟನೆ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೊಪ್ಪ ಮತ್ತು ಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಬಸ್ ಬಿದ್ದ ಪರಿಣಾಮ ಪುಟ್ಟಪ್ಪ ಪೂಜಾರಿ ಅವರಿಗೆ ಸೇರಿದ ಮನೆ ಸಂಪೂರ್ಣ ಜಖಂಗೊಂಡಿದೆ. ಬಸ್ನಲ್ಲಿ 60 ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ಬೆಂಗಳೂರು ಡಿಪೋಗೆ ಸೇರಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…