Featured

ಚಿಕ್ಕಮಗಳೂರು : ತನ್ನ ತೀಕ್ಷ್ಣ ನೆನಪಿನ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಮೂರು ವರ್ಷದ ಆರ್ವಿ -Vishwanews24

ಚಿಕ್ಕಮಗಳೂರು : ತನ್ನ ತೀಕ್ಷ್ಣ ನೆನಪಿನ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಮೂರು ವರ್ಷದ ಆರ್ವಿ -Vishwanews24

ಚಿಕ್ಕಮಗಳೂರು: ತನ್ನ ತೀಕ್ಷ್ಣ ನೆನಪಿನ ಶಕ್ತಿಯಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೂಡಹಳ್ಳಿ ಗ್ರಾಮದ ಮೂರು ವರ್ಷದ ಪುಟ್ಟ ಪೋರಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿ ದಾಖಲೆ ನಿರ್ಮಿಸಿದ್ದಾಳೆ.

ಬಣಕಲ್ ಸಮೀಪದ ಕೂಡಹಳ್ಳಿಯ ಕೆ.ಎಸ್.ಶಾಶ್ವತ್ ಹಾಗೂ ಸ್ಮಿತಾ ದಂಪತಿಯ ಪುತ್ರಿಯಾದ ಮೂರು ವರ್ಷದ ಬಾಲಕಿ ಆರ್ವಿ.ಎಸ್ ತೀಕ್ಷ್ಣ ನೆನೆಪಿನ ಶಕ್ತಿಯಿಂದ ಇಂಡಿಯಾ ಬುಕ್ ಆಪ್ ರೆಕಾರ್ಡ್‍ಗೆ ಆಯ್ಕೆಯಾಗಿದ್ದಾಳೆ. ಆನ್‍ಲೈನ್ ಮೂಲಕ ನಡೆದ ಪರೀಕ್ಷೆಯಲ್ಲಿ ತನ್ನ ಅಸಾಧಾರಣೆ ಪ್ರತಿಭೆ ಹಾಗೂ ನೆನಪಿನ ಶಕ್ತಿಯನ್ನು ಅನಾವರಣಗೊಳಿಸಿದ್ದಾಳೆ. ಪರೀಕ್ಷೆಯಲ್ಲಿ ಕನ್ನಡ ಮತ್ತು ಹಿಂದಿ ಸಂಖ್ಯೆಗಳು, 19 ವಿವಿಧ ವಾಹನಗಳು, ಕನ್ನಡ ಮತ್ತು ಇಂಗ್ಲೀಷ್ ವರ್ಣಮಾಲೆಗಳು, ಇಂಗ್ಲೀಷ್ ಸಂಖ್ಯೆಗಳು, ಕನ್ನಡ-ಇಂಗ್ಲಿಷ್ ಎರಡೂ ಭಾಷೆಯಲ್ಲೂ ದಿನಗಳು, ತಿಂಗಳುಗಳ ಹೆಸರುಗಳನ್ನು ನಿರರ್ಗಳವಾಗಿ ಹೇಳುತ್ತಾಳೆ.

12 ಬಣ್ಣಗಳು, 9 ಆಕಾರಗಳು, 13 ಹಣ್ಣುಗಳು, 15 ತರಕಾರಿಗಳು, 37 ಪ್ರಾಣಿಗಳು, ಏಳು ಇಂಗ್ಲೀಷ್ ಪದ್ಯಗಳು, 7 ಪ್ರಾಣಿಗಳ ಧ್ವನಿಯನ್ನು ಅನುಕರಣೆ ಮಾಡುವ ಮೂಲಕ ತನ್ನ ಅಸಾಧಾರಣ ಪ್ರತಿಭೆಯ ಮೂಲಕ ಬಾಲ್ಯದಲ್ಲೇ ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದ್ದಾಳೆ. ಮಗಳ ಸಾಧನೆ ಕಂಡು ನಮಗೂ ತೀವ್ರ ಸಂತೋಷವಾಗಿದೆ ಎಂದು ಆರ್ವಿಯ ತಾಯಿ ಸ್ಮಿತಾ ಶಾಶ್ವತ್ ತಿಳಿಸಿದ್ದಾರೆ.

ನಮ್ಮ ಮಗಳು ಆರ್ವಿ ಒಂದು ವರ್ಷ ತುಂಬಿದ ಮಗುವಾಗಿದ್ದಾಗಲೇ ತುಂಬಾ ಚೂಟಿಯಿಂದ ಇದ್ದಳು. ನಾವು ಏನು ಹೇಳಿದರೂ ನೆನಪಿಡುವ ಗುಣ ಹೊಂದಿದ್ದ ಅವಳಿಗೆ ಅಭ್ಯಾಸ ಮಾಡಿಸಿದ್ದೇವು. ಅದು ಅವಳಿಗೆ ಪ್ರಶಸ್ತಿ ದೊರೆಯಲು ಕಾರಣವಾಯಿತು ಎಂದು ಆರ್ವಿ ತಾಯಿ ಮಗಳ ಸಾಧನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

 

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

3 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

3 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

4 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

5 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

5 hours ago