Featured

ಚಿಕ್ಕಮಗಳೂರು: ದತ್ತಪೀಠ ಮಾರ್ಗದಲ್ಲಿ ಮೊಳೆ ಚೆಲ್ಲಿದ್ದ ಇಬ್ಬರ ಸೆರೆ – Vishwanews24

ದತ್ತಪೀಠಕ್ಕೆ ಸಾಗುವ ಮಾರ್ಗದಲ್ಲಿ ಮೊಳೆಗಳನ್ನ ಚೆಲ್ಲಿದ್ದ ಆರೋಪಿಗಳು

ಮೊಹಮದ್‌ ಶಹಬಾಸ್‌ ಹಾಗೂ ವಾಹೀದ್‌ ಹುಸೇನ್‌ ಇಬ್ಬರ ಬಂಧನ

ಚಿಕ್ಕಮಗಳೂರು: ದತ್ತ ಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಸಾಗುವ ಮಾರ್ಗದಲ್ಲಿ ಅಪಘಾತವಾಗಲಿ ಎಂಬ ಉದ್ದೇಶದಿಂದ ಕಡಿದಾದ ತಿರುವುಗಳಲ್ಲಿ ಮೊಳೆಗಳನ್ನು ಚೆಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಉಳಿದವರು ತಲೆಮರೆಸಿಕೊಂಡಿದ್ದು ಶೋಧ ಕಾರ್ಯ ನಡೆದಿದೆ ಎಂದು ಎಸ್‌ಪಿ ಉಮಾ ಪ್ರಶಾಂತ್‌ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈಮರ ದತ್ತಪೀಠ ಓಡಾಡುವ ಮಾರ್ಗದಲ್ಲಿ ವಾಹನಗಳಿಗೆ ತೊಂದರೆಯಾಗಲಿ ಎಂಬ ಉದ್ದೇಶದಿಂದ ತಿರುವುಗಳಲ್ಲಿ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಚೆಲ್ಲಿದ್ದು ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೃತ್ಯ ನಡೆಸಿದ ಕಿಡಿಗೇಡಿಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಚಿಕ್ಕಮಗಳೂರು ನಗರದ ಹಾರ್ಡ್‌ವೇರ್‌ ಶಾಪ್‌ನಲ್ಲಿ ಅದೇ ತೆರನಾದ ಮೊಳೆಗಳನ್ನು ಇಬ್ಬರು ವ್ಯಕ್ತಿಗಳು ನಾಲ್ಕು ಕೆಜಿ ಖರೀದಿಸಿದ್ದು, ಖಚಿತ ಮಾಹಿತಿ ಮೇರೆಗೆ ದುಬೈನಗರದ ಮೊಹಮದ್‌ ಶಹಬಾಸ್‌ (29) ಹಾಗೂ ವಾಹೀದ್‌ ಹುಸೇನ್‌ (21) ಎಂಬುವರನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಮಾಹಿತಿ ಇದ್ದು, ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ತಂಡ ಕಾರ್ಯಪ್ರವೃತ್ತವಾಗಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

52 minutes ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 hour ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago