ಚಿಕ್ಕಮಗಳೂರು: ದತ್ತ ಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಸಾಗುವ ಮಾರ್ಗದಲ್ಲಿ ಅಪಘಾತವಾಗಲಿ ಎಂಬ ಉದ್ದೇಶದಿಂದ ಕಡಿದಾದ ತಿರುವುಗಳಲ್ಲಿ ಮೊಳೆಗಳನ್ನು ಚೆಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಉಳಿದವರು ತಲೆಮರೆಸಿಕೊಂಡಿದ್ದು ಶೋಧ ಕಾರ್ಯ ನಡೆದಿದೆ ಎಂದು ಎಸ್‌ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈಮರ ದತ್ತಪೀಠ ಓಡಾಡುವ ಮಾರ್ಗದಲ್ಲಿ ವಾಹನಗಳಿಗೆ ತೊಂದರೆಯಾಗಲಿ ಎಂಬ ಉದ್ದೇಶದಿಂದ ತಿರುವುಗಳಲ್ಲಿ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಚೆಲ್ಲಿದ್ದು ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೃತ್ಯ ನಡೆಸಿದ ಕಿಡಿಗೇಡಿಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಚಿಕ್ಕಮಗಳೂರು ನಗರದ ಹಾರ್ಡ್‌ವೇರ್ ಶಾಪ್‌ನಲ್ಲಿ ಅದೇ ತೆರನಾದ ಮೊಳೆಗಳನ್ನು ಇಬ್ಬರು ವ್ಯಕ್ತಿಗಳು ನಾಲ್ಕು ಕೆಜಿ ಖರೀದಿಸಿದ್ದು, ಖಚಿತ ಮಾಹಿತಿ ಮೇರೆಗೆ ದುಬೈನಗರದ ಮೊಹಮದ್ ಶಹಬಾಸ್ (29) ಹಾಗೂ ವಾಹೀದ್ ಹುಸೇನ್ (21) ಎಂಬುವರನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಮಾಹಿತಿ ಇದ್ದು, ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ತಂಡ ಕಾರ್ಯಪ್ರವೃತ್ತವಾಗಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ನೀಡಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…