ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಆಲೇಖಾನ್ ಹೊರಟ್ಟಿ ಸಮೀಪದ ಇತಿಹಾಸ ಪ್ರಸಿದ್ಧ ಗುಳಿಗ ದೈವದ ಮೂಲ ವಿಗ್ರಹ ಆ ದೇವಿ ಹೇಳಿದ ಜಾಗದಲ್ಲೇ ಪತ್ತೆಯಾಗಿದ್ದು, ಸ್ಥಳಿಯರು ಹಾಗೂ ಈ ಭಾಗದ ಪ್ರವಾಸಿಗರಿಗೆ ಗುಳಿಗ ದೈವದ ಮೇಲಿದ್ದ ದೈವದ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ.
ಕಳೆದ ಏಪ್ರಿಲ್ 24ರಂದು ಗುಳಿಗ ದೈವದ ವಾರ್ಷಿಕ ಪೂಜಾ ಮಹೋತ್ಸವ ನಡೆಯಿತು. ಈ ಸಂದರ್ಭದಲ್ಲಿ ದೈವದ ದರ್ಶನದಲ್ಲಿ ಕ್ಷೇತ್ರದ ನಾಲ್ಕು ಕಿ.ಮೀ. ದೂರದ ಮರವೊಂದರ ಕೆಳಗೆ ಗುಳಿಗ ದೈವದ ಮೂಲ ವಿಗ್ರಹ ಇದೆ. ಹುಡುಕಿದರೆ ವಿಗ್ರಹ ಸಿಗಲಿದೆ ಎಂದು ದೈವದ ದರ್ಶನದಲ್ಲಿ ದೇವಿಯೇ ಹೇಳಿದ್ದಳು. ಹಾಗಾಗಿ, ಗುಳಿಗ ದೈವದ ಕ್ಷೇತ್ರ ಅಭಿವೃದ್ಧಿಯ ಪದಾಧಿಕಾರಿಗಳು ಗುಳಿಗ ದೈವದ ದೇವಸ್ಥಾನದಿಂದ ಮೂರು-ನಾಲ್ಕು ಕಿ.ಮೀ. ದೂರದಲ್ಲಿ ಹುಡುಕಾಟ ನಡೆಸಿದ್ದಾರೆ. ಆಗ ಆಲೇಖಾನ್ ಎಸ್ಟೇಟ್ ಒಂದರ ಮರದ ಬುಡದಲ್ಲಿ ದೇವಿಯ ಮೂಲವಿಗ್ರಹ ಪತ್ತೆಯಾಗಿದೆ.
ದೇವಸ್ಥಾನದಿಂದ ನಾಲ್ಕು ಕಿ.ಮೀ. ದೂರದ ಮರವೊಂದರ ಕೆಳಗೆ ನೋಡಿದಾಗ ದೇವಿನ ಕಂಚಿನಮೂರ್ತಿ, ಗಂಟೆ ಹಾಗೂ ಕತ್ತಿ ಪತ್ತೆಯಾಗಿವೆ. ನೂರಾರು ವರ್ಷಗಳ ಹಿಂದೆ ಈ ಜಾಗದಲ್ಲಿ ಚಾಮುಂಡೇಶ್ವರಿ, ಗುಳಿಗಮ್ಮ, ಬಬ್ಬುಸ್ವಾಮಿಗೆ ವಿಜೃಂಭಣೆಯಿಂದ ಪೂಜಾ, ವಿಧಿ-ವಿಧಾನಗಳು ನಡೆಯುತ್ತಿದ್ದವು. ಈಗ ಗುಳಿಗಮ್ಮ ದೇವಿ ಹೇಳಿರೋ ಜಾಗದಲ್ಲೇ ಪುರಾತನ ಮೂರ್ತಿಗಳು ಸಿಕ್ಕಿರೋದು ಕ್ಷೇತ್ರ ಹಾಗೂ ದೇವಿಯ ಮಹಿಮೆಯನ್ನ ಇಮ್ಮಡಿಗೊಳಿಸಿದೆ.
ದೇವಿ ಹೇಳಿದ ಜಾಗದಲ್ಲೇ ಮೂಲ ವಿಗ್ರಹ ಪತ್ತೆಯಾದ ಹಿನ್ನೆಲೆ ಭಕ್ತರು ದೇವಾಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಈಗ ಸಿಕ್ಕಿರೋ ಪುರಾತನ ಮೂರ್ತಿಗಳನ್ನ ಅದೇ ಜಾಗದಲ್ಲಿ ಪುನರ್ ಪ್ರತಿಷ್ಠಾಪಿಸಿ ದೇವಿಯ ಹಿಂದಿನ ಗತಕಾಲದ ವೈಭವನ್ನು ಮತ್ತೆ ಮರುಕಳಿಸಲು ಯೋಚಿಸಿದ್ದಾರೆ. ಆದರೆ, ಈಗ ಗುಳಿಗ ದೈವ ಹೇಳಿರೋ ಜಾಗದಲ್ಲೇ ಮೂಲ ವಿಗ್ರಹ ಸಿಕ್ಕಿರೋದು ಮುಂದಿನ ದಿನಗಳಲ್ಲಿ ದೈವ ದರ್ಶನದ ಹೇಳಿಕೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…