ಚಿಕ್ಕಮಗಳೂರು: ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹುಟ್ಟೂರು ಚಿಕ್ಕಮಗಳೂರು ತಾಲೂಕಿನ ಚಿಕ್ಕಮಾಗರಹಳ್ಳಿ ಗ್ರಾಮದಲ್ಲೂ ಮುಸ್ಲಿಂ ಬ್ಯಾನ್ ಕೂಗು ಜೋರಾಗಿದೆ.
ಭಾನುವಾರದಿಂದ ಆರಂಭವಾದ ದೇವೀರಮ್ಮನ ಸುಗ್ಗಿ ಹಬ್ಬಕ್ಕೆ ಮುಸ್ಲಿಮರಿಗೆ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ಊರಿನ ಆರಂಭದಲ್ಲೇ ಬೋರ್ಡ್ ಹಾಕಿದ್ದಾರೆ. ಜಾತ್ರೆ ಇನ್ನೊಂದು ವಾರಗಳ ಕಾಲ ನಡೆಯಲಿದೆ. ಗುರುವಾರ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಸಾವಿರಾರು ಜನ ಸೇರುತ್ತಾರೆ.
ಈ ಬಾರಿಯ ಸುಗ್ಗಿ ಹಬ್ಬಕ್ಕೆ ಮುಸ್ಲಿಮರಿಗೆ ನಮ್ಮ ಊರಿನಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶವಿಲ್ಲವೆಂದು ಹಳ್ಳಿಯ ದ್ವಾರದ ಬಾಗಿಲಿನಲ್ಲೇ ಬ್ಯಾನರ್ ಹಾಕಿದ್ದಾರೆ. ಈ ದೇಶದ ಕಾನೂನನ್ನು ಗೌರವಿಸದ, ನಾವು ಪೂಜಿಸುವ ಗೋವುಗಳನ್ನ ಕಡಿದು ಕೊಲ್ಲುವ ಹಾಗೂ ದೇಶದ ಅಖಂಡತೆಗೆ ಸಾವಲು ಎಸೆಯುವ ಮುಸ್ಲಿಂ ಗೋಕಟುಕರ ಜೊತೆ ನಾವು ವ್ಯವಹರಿಸುವುದಿಲ್ಲ ಹಾಗೂ ಅವರು ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಊರಿನ ಮುಂದೆಯೇ ದೊಡ್ಡ ಬೋರ್ಡ್ ಹಾಕಿದ್ದಾರೆ.
ಚಿಕ್ಕಮಾಗರವಳ್ಳಿ, ದೊಡ್ಡಮಾಗರವಳ್ಳಿ, ದೋಣಗೂಡಿಗೆ, ಸಾರಳ್ಳಿ ಹಾಗೂ ಹಳಿಯೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳೆಲ್ಲಾ ಸೇರಿ ಈ ಜಾತ್ರೆ ನಡೆಸುತ್ತಿದ್ದು, ಈವರಗೆ ಮುಸ್ಲಿಮರು ಇಲ್ಲಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದರು. ಈ ಬಾರಿ ಈ ಜಾತ್ರೆಗೆ ಮುಸ್ಲಿಮರಿಗೆ ಅವಕಾಶವಿಲ್ಲದಂತಾಗಿದೆ.
ಪ್ರತಿ ವರ್ಷ ಈ ಜಾತ್ರೆಯಲ್ಲಿ ಹತ್ತಾರು ಮುಸ್ಲಿಮರು ವಿವಿಧ ರೀತಿಯ ಅಂಗಡಿ ಹಾಕಿ ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಆದರೆ, ಈ ಬಾರಿ ಹಿಜಬ್ ವಿವಾದಕ್ಕೆ ಹೈಕೋರ್ಟ್ ನೀಡಿದ ತೀರ್ಪನ್ನ ಗೌರವಿಸದ ಹಿನ್ನೆಲೆ ಜಾತ್ರೆಯಲ್ಲಿ ಮುಸ್ಲಿಮರು ವ್ಯಾಪಾರ-ವಹಿವಾಟು ನಡೆಸದಂತಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…