ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಶಕ್ತಿದೇವತೆ ಬಿಂಡಿಗ ದೇವೀರಮ್ಮ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಬೆಟ್ಟ ಏರಿ ದರ್ಶನ ಪಡೆಯುವ ಭಕ್ತರಿಗೆ ಜಿಲ್ಲಾಡಳಿತ ಹಾಗೂ ದೇವಾಲಯ ಆಡಳಿತ ಮಂಡಳಿ ಹೊಸ ನಿಯಮಗಳನ್ನು ಜಾರಿಗೊಳಿಸಿದೆ.
ಸಮುದ್ರ ಮಟ್ಟದಿಂದ ಸುಮಾರು 3,800 ಅಡಿ ಎತ್ತರದಲ್ಲಿರುವ ದುರ್ಗಮ ಬೆಟ್ಟದ ಹಾದಿಯಲ್ಲಿ ವರ್ಷಕ್ಕೊಮ್ಮೆ ಮಾತ್ರ ದೇವೀರಮ್ಮನ ದರ್ಶನ ಭಾಗ್ಯ ದೊರೆಯಲಿದ್ದು, ಈ ಬಾರಿ 2 ದಿನಗಳ ಕಾಲ ಬೆಟ್ಟ ಹತ್ತಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಸುರಕ್ಷತೆಯ ದೃಷ್ಟಿಯಿಂದ 15 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದೊಳಗಿನ ಭಕ್ತರಿಗೆ ಮಾತ್ರ ಬೆಟ್ಟ ಹತ್ತಲು ಅವಕಾಶ ನೀಡಲಾಗಿದ್ದು, ರಾತ್ರಿ ವೇಳೆ ಬೆಟ್ಟ ಹತ್ತುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ನವೆಂಬರ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಾಗೂ ನವೆಂಬರ್ 8ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ಭಕ್ತರ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಬಿಂಡಿಗ ಮಲ್ಲೇನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಈ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುತ್ತಾರೆ. ಈ ಬಾರಿಯೂ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಸ್ಥಳದಲ್ಲಿ ಅಗ್ನಿಶಾಮಕ ದಳ, ಪೊಲೀಸ್, ಗೃಹರಕ್ಷಕ ದಳ ಹಾಗೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲು ಸೂಚಿಸಲಾಗಿದೆ.
ಜಾತ್ರೆಯ ಸಿದ್ಧತೆ ಹಾಗೂ ಭದ್ರತಾ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ದಯ್ಯಾ, ದೇವಾಲಯ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ತಂಡ ಬೆಟ್ಟ ಏರಿ ಸ್ಥಳ ಪರಿಶೀಲನೆ ನಡೆಸಿದೆ.
ಕಾಪು ಜೇಸಿಐಗೆ ವಲಯದ ಅತ್ಯುತ್ತಮ ಘಟಕ ಪ್ರಶಸ್ತಿ ಪ್ರದಾನ ಕಾಪು ಪರಿಸರದಲ್ಲಿ ಸೇವಾ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಕಾಪು ಜೇಸಿಐಗೆ…
ಅಗ್ನಿಪಥ್ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಬದಲಾವಣೆ .. ಅಗ್ನಿವೀರರ ಸೇವಾ ಅವಧಿ 2 ವರ್ಷ ವಿಸ್ತರಣೆ ನವದೆಹಲಿ: ಕೇಂದ್ರ…
ಕಾರ್ಕಳ: ಯುವತಿಗೂ ನ್ಯಾಯ ಸಿಗಬೇಕು ; ಪ್ರದೀಪ್ ಪೂಜಾರಿಯ ಸಾವಿಗೂ ನ್ಯಾಯ ದೊರೆಯಬೇಕು : ಶುಭದ ರಾವ್ ಕಾರ್ಕಳ: ಪೆರ್ಡೂರಿನಲ್ಲಿ…
ಮಂಗಳೂರು: ಬೈಕಂಪಾಡಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 16 ಗೋವುಗಳ ರಕ್ಷಣೆ ಮಂಗಳೂರು: ನಗರದ ಬೈಕಂಪಾಡಿ ಪರಿಸರದಲ್ಲಿ ಬುಧವಾರ ಮುಂಜಾನೆ…
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ ಕಡಿವಾಣ : ಒಂದಕ್ಕಿಂತ ಹೆಚ್ಚು ಮದುವೆಯಾದರೆ ಸರ್ಕಾರಿ ಉದ್ಯೋಗದಿಂದ ವಜಾ ದಿಸ್ಪುರ್ : ಅಸ್ಸಾಂ ಸರ್ಕಾರವು ಬಹುಪತ್ನಿತ್ವಕ್ಕೆ…
ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಶಾಕ್ ; ಇಂದು ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಬಸ್ ಪ್ರಯಾಣ…