ಚಿಕ್ಕಮಗಳೂರು: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ.
ಮೃತನನ್ನ 17 ವರ್ಷದ ಸುಶಾಂತ್ ಎಂದು ಗುರುತಿಸಲಾಗಿದೆ. ಮೃತ ಸುಶಾಂತ್ ಹರಿಹರಪುರ ಹೋಬಳಿಯ ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್ ಗ್ರಾಮದ ನಿವಾಸಿ.
ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಬೆಳಿಗ್ಗೆ ಮನೆಯಲ್ಲಿ ಯಾರಿಗೂ ತಿಳಿಯದಂತೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದವರು ಗಮನಿಸಿದ ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ವಿದ್ಯಾಭ್ಯಾಸದಲ್ಲಿ ಪ್ರತಿಭಾನ್ವಿತನಾಗಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…