Featured

ಚಿಕ್ಕಮಗಳೂರು : ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು – Vishwanews24

ಚಿಕ್ಕಮಗಳೂರು : ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶೃಂಗೇರಿ  ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.

ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ.

ಸುರಕ್ಷಾ ಗಣೇಶ ಹಬ್ಬಕ್ಕೆಂದು  ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದಳು.

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago