ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪ್ರಪಾತಕ್ಕೆ ಉರುಳಿ ಬಿದ್ದು, ಓರ್ವ ಮಹಿಳೆ ಮೃತಪಟ್ಟು, ಐವರಿಗೆ ಗಂಭೀರ ಗಾಯವಾದ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ಇಂದು ನಸುಕಿನ ವೇಳೆ ನಡೆದಿದೆ.
ಯಲಹಂಕ ನಿವಾಸಿ ಸುರೇಖಾ (45) ಮೃತ ಮಹಿಳೆ.
ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ ನಲ್ಲಿ ಸುಮಾರು 48ಕ್ಕೂ ಹೆಚ್ಚು ಪ್ರವಾಸಿಗರಿದ್ದು, ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದ ಬಸ್ ಎಂದು ತಿಳಿದುಬಂದಿದೆ.
ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಗಿನ ಜಾವ 4:45 ಸಮಯದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳಿಗೆ ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇದೇ ಜಾಗದಲ್ಲಿ ನೂರಾರು ಅಪಘಾತಗಳು ಸಂಭವಿಸಿದ್ದು, ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸುವಂತೆ ಸ್ಥಳಿಯರು ಹಲವು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ದೂರಿದ್ದಾರೆ ಸ್ಥಳೀಯರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…