ಚಿಕ್ಕಮಗಳೂರು:- ಟ್ಯಾಕ್ಸಿ ಚಾಲಕರು ಪ್ರಯಾಣಿಕರ ಜೊತೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ, ಸಹಕರಿಸಿದಾಗ ಮಾತ್ರ ಚಾಲನೆ ವೃತ್ತಿಯಲ್ಲಿ ಮುಂದುವರೆಯಲು ಸಾಧ್ಯ ಎಂದು ಹಿರೇಮಗಳೂರು ಕಣ್ಣನ್ ಹೇಳಿದರು.
ನಗರದ ಹಿರೇಮಗಳೂರು ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಟ್ಯಾಕ್ಸಿ ಡೈರ‍್ಸ್ ಆರ್ಗನೈಜೇಷನ್ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಚಾಲಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಪ್ರಯಾಣಿಕರ ಬದುಕಿಗೆ ಟ್ಯಾಕ್ಸಿ ಚಾಲಕರು ನಿಜವಾದ ಸಂರಕ್ಷಕ. ಭಗವಂತನು ಯಾವ ಕ್ಷಣದಲ್ಲಿ ಚಾಲಕನಿಗೆ ಸಂರಕ್ಷಣೆ ನೀಡಿತ್ತಾನೋ ಆ ಕ್ಷಣದಿಂದಲೇ ಪ್ರಯಾಣಿಕರ ರಕ್ಷಣೆ ಚಾಲಕನ ಮೇಲಿರುತ್ತದೆ ಎಂದ ಅವರು ಭಗವಾನ್ ಶ್ರೀಕೃಷ್ಣನೂ ಕೂಡಾ ಯುದ್ಧಭೂಮಿಯಲ್ಲಿ ಅರ್ಜುನನ ಸಾರಥಿಯಾಗಿದ್ದರು ಎಂದು ಹೇಳಿದರು.
ಇದನ್ನೂ ಓದಿ :
ಚಾಲನೆ ವೃತ್ತಿಯಲ್ಲಿರುವವರು ಪ್ರಯಾಣಿಕರಲ್ಲಿ ಯಾವುದೇ ಜಾತಿ, ಧರ್ಮ ಬೇಧ ಬಾವ ಮಾಡದೇ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಆ ನಿಟ್ಟಿನಲ್ಲಿ ಚಾಲಕರು ತಮ್ಮ ವೃತ್ತಿಯನ್ನು ಗೌರವಿಸಿದಂತೆ ಪ್ರತಿಯೊಬ್ಬ ಪ್ರಯಾಣಿಕರನ್ನು ಗೌರವಿಸಿದಾಗ ಮಾತ್ರ ಯಶಸ್ಸು ಕಾಣಬಹುದು ಎಂದು ತಿಳಿಸಿದರು.
ಟ್ಯಾಕ್ಸಿ ಡೈರ‍್ಸ್ ಆರ್ಗನೈಜೇಷನ್ ಜಿಲ್ಲಾಧ್ಯಕ್ಷ ಹೆಚ್.ಕೆ.ಪ್ರಕಾಶ್ ಮಾತನಾಡಿ ಜಿಲ್ಲೆಯಾದ್ಯಂತ ಇರುವ ಟ್ಯಾಕ್ಸಿ ಚಾಲಕರನ್ನು ಮುಖಾಮುಖಿ ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ ಸಲಹೆ ಸಹಕಾರ ಪಡೆಯುವ ಉದ್ದೇಶದಿಂದ ತಾಲ್ಲೂಕು ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಅನಧಿಕೃತವಾಗಿ ಟ್ಯಾಕ್ಸಿ ನಿಲ್ದಾಣಗಳಲ್ಲಿ ಬಿಳಿ ಬೋರ್ಡ್ನ ಹಲವಾರು ಟ್ಯಾಕ್ಸಿಗಳು ಸಂಚರಿಸುತ್ತಿದ್ದು ಇದರಿಂದ ಹಳದಿ ಬೋರ್ಡಿನ ಟ್ಯಾಕ್ಸಿ ಚಾಲಕರಿಗೆ ತೀವ್ರ ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ವಾಗಿಲ್ಲ. ಈ ವಿರುದ್ಧ ಚಾಲಕರ ಸಭೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.ಇದೇ ವೇಳೆ ಕರ್ನಾಟಕ ಟ್ಯಾಕ್ಸಿ ಡೈರ‍್ಸ್ ಆರ್ಗನೈಜೇಷನ್ ಸಂಸ್ಥೆ ಏಳು ಮಂದಿ ಟ್ಯಾಕ್ಸಿ ಚಾಲಕರು ಸೇರ್ಪಡೆಗೊಂಡರು.
ಇದನ್ನೂ ಓದಿ :
ಈ ಸಂದರ್ಭದಲ್ಲಿ ಟ್ಯಾಕ್ಸಿ ಡೈರ‍್ಸ್ ಆರ್ಗನೈಜೇಷನ್ ಸಭಾಧ್ಯಕ್ಷ ಸುನೀಲ್, ಗೌರವಾಧ್ಯಕ್ಷ ರಾಜೇಶ್ ಮರಸಣಿಗೆ, ಪ್ರಧಾನ ಕಾರ್ಯದರ್ಶಿ ಇ.ಗಿರೀಶ್, ಸಹ ಕಾರ್ಯದರ್ಶಿ ಕಡೂರು ಸಂತೋಷ್, ಖಜಾಂಚಿ ಪ್ರದೀಪ್, ಸಹ ಖಜಾಂಚಿ ಹರೀಶ್ ಸದಸ್ಯರುಗಳಾದ ರವಿ ಬಸರಿಕಟ್ಟೆ, ಸುಂದ್ರೇಶ್, ಫಿಲಿಕ್ಸ್ ಪಿಂಟೋ, ವಿನೋದ್, ಯಶು, ಕಾಂತರಾಜು, ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…