Featured

ಚಿಕ್ಕಮಗಳೂರು : ಭಾರಿ ಮಳೆಗೆ ಸ್ಮಶಾನ ಮುಳುಗಡೆ ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ – Vishwanews24

ಚಿಕ್ಕಮಗಳೂರು : ಭಾರಿ ಮಳೆಗೆ ಸ್ಮಶಾನ ಮುಳುಗಡೆ ; ಅಂತ್ಯಕ್ರಿಯೆಗೆ ಜಾಗವಿಲ್ಲದೆ 2 ದಿನ ಮನೆಯಲ್ಲೇ ಉಳಿದ ಮೃತದೇಹ

ಚಿಕ್ಕಮಗಳೂರು: ರಾಜ್ಯದಲ್ಲಿ ನಿರಂತರವಾಗಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಮಳೆ ವ್ಯಾಪಕವಾಗಿದೆ. ಹೀಗಾಗಿ ಅವಾಂತರ ಸೃಷ್ಟಿಯಾಗಿದ್ದು, ಮೃತವ್ಯಕ್ತಿಯ ಶವವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಎರಡು ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿರುವಂತಹ ಕಡೂರು ತಾಲೂಕಿನ ಎಸ್.ಬೊಮ್ಮೇನಹಳ್ಳಿಯಲ್ಲಿ ನಡೆದಿದೆ.

ಪ್ರಮೋದ್‌ ಎಂಬಾತ ಮೃತಪಟ್ಟಿದ್ದ. ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಜನ ಪರದಾಡಿದ್ದು, ಎರಡು ದಿನಗಳ ಬಳಿಕ ಅಂತ್ಯಸಂಸ್ಕಾರ ಮಾಡಿದ್ದಾರೆ. ಕಡೂರು ತಾಲೂಕಿನ ಚಿಕ್ಕ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಬೊಮ್ಮನಹಳ್ಳಿಯಲ್ಲಿ ಬಹಳ ವರ್ಷಗಳ ನಂತರ ದೇವನೂರು ಕೆರೆ ತುಂಬಿದ್ದು, ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿತ್ತು. ಹೀಗಾಗಿ ಈ ಗ್ರಾಮದಿಂದ ಸ್ಮಶಾನಕ್ಕೆ ಹೋಗುವ ದಾರಿ ಕೂಡ ನೀರಿನಿಂದ ಜಲಾವೃತವಾಗಿದ್ದು, ಮೃತದೇಹ ಕೊಂಡೊಯ್ಯಲು ಸಾಧ್ಯವಾಗದಿರುವುದರಿಂದ ಎರಡು ದಿನಗಳ ಕಾಲ ಶವವಿಟ್ಟು ಕಾದಿದ್ದಾರೆ.

ಎರಡು ದಿನದ ಬಳಿಕ ನೀರು ಸ್ವಲ್ಪ ಕಡಿಮೆಯಾದ ನಂತರ ನೀರಲ್ಲೇ ಶವವನ್ನು ಸ್ಮಶಾನಕ್ಕೆ ಗ್ರಾಮಸ್ಥರು ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಶವಸಂಸ್ಕಾರ ಮಾಡಲು ಗ್ರಾಮಸ್ಥರು ಪರದಾಡಿದ್ದಾರೆ. ಬಳಿಕ ಸ್ವಲ್ಪ ಎತ್ತರದ ಭಾಗದಲ್ಲಿ ಗುಂಡಿ ತೆಗೆದು ಅಲ್ಲಿ ಮೃತರ ಅಂತ್ಯಕ್ರಿಯೆ ಮಾಡಲಾಗಿದೆ.

ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್ .. ಸಂಜೆ 5 ಗಂಟೆಗೆ ಸ್ವಗ್ರಾಮ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

19 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

20 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

20 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

20 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

21 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

21 hours ago