ಚಿಕ್ಕಮಗಳೂರು: ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಅವಾಂತರಗಳು ಮುಂದುವರಿದಿದ್ದು, ಮುಳ್ಳಯ್ಯನಗಿರಿ-ದತ್ತಪೀಠಕ್ಕೆ ತೆರಳುವ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಚಿಕ್ಕಮಗಳೂರು ತಾಲೂಕಿನ ಚನ್ನಗೋಡನಹಳ್ಳಿ ಸಮೀಪ ಮುಳ್ಳಯ್ಯನಗಿರಿ ಮಾರ್ಗದಲ್ಲಿ ಭಾರೀ ಗಾಳಿಗೆ ಮರ ಬುಡಸಮೇತ ಉರುಳಿ ಪ್ರವಾಸಿ ಬೈಕ್ ಮೇಲೆ ಬಿದ್ದಿದೆ. ಮರದ ತುದಿ ಭಾಗ ಮಾತ್ರ ಬೈಕ್‌ಗೆ ತಗುಲಿದ್ದರಿಂದ ಸವಾರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಮಿಯ ತೇವಾಂಶ ಇನ್ನೂ ಹೆಚ್ಚಿರುವುದರಿಂದ ಹಲವೆಡೆ ಮಣ್ಣು ಕುಸಿಯುವ ಘಟನೆಗಳು ವರದಿಯಾಗುತ್ತಿವೆ. ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗದಲ್ಲೂ ಅಲ್ಲಲ್ಲಿ ಭೂ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರದಲ್ಲಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಹಾಗೂ ದತ್ತಪೀಠಕ್ಕೆ ತೆರಳುವ ಪ್ರವಾಸಿಗರು ಮತ್ತು ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…