ಚಿಕ್ಕಮಗಳೂರು: ಮನೆಯಂಗಳದಲ್ಲಿ ಆಟ ಆಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮಧ್ಯಪ್ರದೇಶ ಮೂಲದ ಸುನೀತಾ ಎಂಬವರ ಪುತ್ರಿಯರಾದ ಸೀಮಾ (6) ಮತ್ತು ರಾಧಿಕಾ (2) ಮೃತಪಟ್ಟ ಮಕ್ಕಳು.
ಮಧ್ಯಪ್ರದೇಶದಿಂದ ಬಂದು ಕೊಪ್ಪದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಸೀಮಾ ದಂಪತಿ ತೋಟದ ಮನೆಯಲ್ಲಿದ್ದರು. ಮಂಗಳವಾರ ಮಕ್ಕಳನ್ನು ಮನೆಯಲ್ಲೇ ಬಿಟ್ಟು ತಾಯಿ ಸೀಮಾ ತೋಟದ ಕೆಲಸಕ್ಕೆ ತೆರಳಿದ್ದರು. ಸಂಜೆ 7 ಗಂಟೆ ವೇಳೆ ಮನೆಗೆ ಹಿಂದಿರುಗಿದಾಗ ಮಕ್ಕಳು ಕಾಣೆಯಾಗಿದ್ದರು. ಬಳಿಕ ಇತರ ಕಾರ್ಮಿಕರ ಜೊತೆಗೂಡಿ ಹುಡುಕಾಡಿದಾಗ 8 ಗಂಟೆ ವೇಳೆ ಬಾವಿಯಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.
ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…