ಚಿಕ್ಕಮಗಳೂರು : ಮುಳ್ಳಯ್ಯನಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ – vishwanews24
ಚಿಕ್ಕಮಗಳೂರು : ಮುಳ್ಳಯ್ಯನಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ
ಚಿಕ್ಕಮಗಳೂರು : ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀನಂದನ ಎಂದು ಗುರುತಿಸಲಾಗಿದೆ.
ಕೇರಳದ ಪಾಲಕ್ಕಾಡ್ ಮೂಲದ 14 ವರ್ಷದ ಈ ಬಾಲಕಿ, ತನ್ನ ಪೋಷಕರು ಹಾಗೂ ಸುಮಾರು 40 ಜನರ ಪ್ರವಾಸಿ ತಂಡದೊಂದಿಗೆ ಮಂಗಳವಾರ ಚಿಕ್ಕಮಗಳೂರಿಗೆ ಆಗಮಿಸಿದ್ದಳು. ಏಪ್ರಿಲ್ 7ರ ಮಂಗಳವಾರ ಸಂಜೆ ಸುಮಾರು 6 ಗಂಟೆಯ ವೇಳೆಗೆ ಚಂದ್ರದ್ರೋಣ ಪರ್ವತ ಸರಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಕಾಣೆಯಾಗಿರುವುದು ತಿಳಿದುಬಂದಿದೆ. ಬಾಲಕಿ ಕಾಣೆಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಗಾಬರಿಗೊಂಡ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.
ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ – vishwanews24
ಬಾಲಕಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಜಿಲ್ಲಾಡಳಿತ, ತಡರಾತ್ರಿವರೆಗೂ ಹುಡುಕಾಟ ನಡೆಸಿದೆ. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಿಬ್ಬಂದಿಗಳು ವಾಪಸ್ಸಾಗಿದ್ದರು.
ಇಂದು ಮುಂಜಾನೆಯಿಂದಲೇ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡಗಳು ಬೆಟ್ಟದ ತಪ್ಪಲಿನಲ್ಲಿ ಜಾಲಾಡುತ್ತಿವೆ. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾಗಿರುವುದರಿಂದ ಬಾಲಕಿಯನ್ನು ಪತ್ತೆ ಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅರಣ್ಯ ರಕ್ಷಕರು ವಿವಿಧ ತಂಡಗಳಾಗಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶೋಧ ನಡೆಸುತ್ತಿದ್ದಾರೆ.
ಬೆಳ್ತಂಗಡಿ : ಕ್ರೇನ್ ಢಿಕ್ಕಿ ; ಪಾದಚಾರಿ ಸ್ಥಳದಲ್ಲೇ ಸಾವು – vishwanews24
