Featured

ಚಿಕ್ಕಮಗಳೂರು: ರೈಲ್ವೇ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ – vishwanews24

ಚಿಕ್ಕಮಗಳೂರು: ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಚಿಕ್ಕಮಗಳೂರು: ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ರೈಲು ಅನಾಹುತ ತಪ್ಪಿದೆ.ಕಳೆದ ನಾಲ್ಕು ದಿನಗಳಿಂದ ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು  ತಾಲೂಕಿನ ಕಣಿವೆ ಗ್ರಾಮದಲ್ಲಿ‌ ರೈಲ್ವೇ ಹಳಿ ಲಯ ತಪ್ಪಿ ಹಳಿಗೆ ಹಾಕಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿತ್ತು. ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ ನೀರು ಉಕ್ಕಿ ಹರಿದ ಪರಿಣಾಮ ಹಳಿಯಲ್ಲಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿದ್ದವು.

ಇಂದು ಬೆಳಗ್ಗೆ ಚಿಕ್ಕಮಗಳೂರಿನಿಂದ ಶಿವಮೊಗ್ಗ ಕಡೆಗೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲು ಕಣಿವೆ ಬಳಿ ಆಗಮಿಸುತ್ತಿದ್ದಂತೆ ರೈಲ್ವೆ ಸಿಬ್ಬಂದಿ ತಕ್ಷಣ ನಿಲ್ಲಿಸುವಂತೆ ಲೋಕೋ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಎಚ್ಚೆತ್ತ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದು ಈ ವೇಳೆ ರೈಲ್ವೆ ಸಿಬ್ಬಂದಿಗಳು ತುರ್ತು ದುರಸ್ತಿ ಕಾರ್ಯ ಕೈಗೊಂಡು ರೈಲಿನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ತಾತ್ಕಾಲಿಕ ದುರಸ್ತಿ ಕಾರ್ಯ ಪೂರ್ಣಗೊಂಡ 45 ನಿಮಿಷಗಳ ಬಳಿಕ ರೈಲು ತಡವಾಗಿ ಶಿವಮೊಗ್ಗದತ್ತ ಪ್ರಯಾಣ ಬೆಳೆಸಿತು.

ಈ ಸ್ಥಳದ ಹಳಿ ಪಕ್ಕದಲ್ಲೇ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ರೈಲ್ವೇ ಸಿಬ್ಬಂದಿ ನೀರನ್ನು ಸರಾಗವಾಗಿ ಹರಿಯುವಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಘಟನೆ ನಡೆದಿರುವ ಕಣಿವೆ ಹಳ್ಳಿಯೂ ಚಿಕ್ಕಮಗಳೂರು ರೈಲ್ವೇ ನಿಲ್ದಾಣದಿಂದ 10 ಕಿ.ಮೀ ಅಂತರದಲ್ಲಿದ್ದ ಕಾರಣ ರೈಲಿನ ವೇಗವು ಕಡಿಮೆ ಇತ್ತು. ಇಂದು ಬೆಳಗ್ಗೆ 7:10ಕ್ಕೆ ರೈಲ್ವೆ ನಿಲ್ದಾಣದಿಂದ ಹೊರಟಿದ್ದ ಪ್ಯಾಸೆಂಜರ್ ರೈಲು 7.30ರ ವೇಳೆಗೆ ಕಣಿವೆಹಳ್ಳಿಗೆ ತಲುಪಿತ್ತು.

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

30 minutes ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

40 minutes ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

47 minutes ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

1 hour ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

1 hour ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

2 hours ago