Featured

ಚಿಕ್ಕಮಗಳೂರು : ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್  :  ಫೋಟೋ , ವಿಡಿಯೋ ತೆಗೆದು ಬ್ಲಾಕ್ ಮೇಲ್  – ಯುವಕ ಮೊಹಮದ್ ರೌಫ್ ವಿರುದ್ಧ ಯುವತಿ ದೂರು  – Vishwanews24

ಚಿಕ್ಕಮಗಳೂರು : ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್  :  ಫೋಟೋ , ವಿಡಿಯೋ ತೆಗೆದು ಬ್ಲಾಕ್ ಮೇಲ್  – ಯುವಕ ಮೊಹಮದ್ ರೌಫ್ ವಿರುದ್ಧ ಯುವತಿ ದೂರು

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ  ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನೊಂದ ಯುವತಿ ಮೊಹಮದ್ ರೌಫ್ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ನಾನು ಕಾರ್ಕಳದ ಮೀನಾಕ್ಷಿ ಕಾಲೇಜಿನಲ್ಲಿ ಓದುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ಮಹಮದ್ ರೌಫ್ ಸ್ನೇಹಿತನಾಗಿದ್ದ. ತದನಂತರ ಭೇಟಿಯಾಗಿ ಮಾತನಾಡಿದ್ದೇವು. ಊಟಕ್ಕೆ ಹೋಗೋಣ ಎಂದು ಊಟ ಮಾಡಿದ ಬಳಿಕ ಕುಡಿಯಲು ಜ್ಯೂಸ್ ಕೊಟ್ಟಿದ್ದನು. ಜ್ಯೂಸ್ ಕುಡಿದ ಬಳಿಕ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ. ಸ್ವಲ್ಪ ಹೊತ್ತಿನ ಬಳಿಕ ನನ್ನನ್ನು ಕರೆತಂದು ಹಾಸ್ಟೆಲ್ ಬಳಿ ಬಿಟ್ಟು ಹೋಗಿದ್ದರು. ಮರುದಿನ ಮತ್ತೆ ಕರೆದಾಗ ನಾನು ಬರುವುದಿಲ್ಲ ಎಂದು ಹೇಳಿದ್ದಕ್ಕೆ ನನ್ನ ಖಾಸಗಿ ಫೋಟೋಗಳನ್ನು ನನಗೆ ಕಳುಹಿಸಿ, ಬರದಿದ್ದರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ ಮಾಡುತ್ತೇನೆ ಎಂದು ಹೆದರಿಸುತ್ತಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಮಗಳನ್ನು ಕೊಂದು, ದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಎಸೆದ ತಂದೆ – Vishwanews24

ಹೀಗೆ, ಕಳೆದ ಮೂರು ವರ್ಷಗಳಿಂದ ನನಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ. ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಬಲವಂತವಾಗಿ ಕುಡಿಸಿ ನನ್ನ ಫೋಟೋ ಹಾಗೂ ವಿಡಿಯೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ದೂರಿದ್ದಾಳೆ.

ಈಗ ಮೊಹಮದ್ ರೌಫ್ ವಿದೇಶದಲ್ಲಿ ಕೂತು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುತ್ತಿದ್ದಾನೆ. ಇದರಿಂದ ನನ್ನ ಹಾಗೂ ಮನೆಯವರ ಮಾನಸಿಕ ನೆಮ್ಮದಿ ಹಾಳಾಗಿದೆ. ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಫೋಟೋಗಳನ್ನ ಡಿಲೀಟ್ ಮಾಡಿಸಿ ಮೊಹಮದ್ ರೌಫ್, ಇರ್ಫಾನ್ ಹಾಗೂ ಸೈಫ್ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವತಿ ಮನವಿ ಮಾಡಿದ್ದಾಳೆ. ಇದನ್ನೂ ಓದಿ : 📛 ಮಂಗಳೂರು: ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣದ ಆರೋಪಿ ಶಾರಿಕ್: ಎಡಿಜಿಪಿ..

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

11 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

11 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

12 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

12 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

12 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

12 hours ago