Featured

ಚಿಕ್ಕಮಗಳೂರು: ಶಿಕ್ಷಕಿಗೆ ಮಾರಣಾಂತಿಕ ಹಲ್ಲೆ ; ಆರೋಪಿಯ ಬಂಧನ – vishwanews24

ಚಿಕ್ಕಮಗಳೂರು: ಶಿಕ್ಷಕಿಗೆ ಮಾರಣಾಂತಿಕ ಹಲ್ಲೆ ; ಆರೋಪಿಯ ಬಂಧನ

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕೊಗ್ರೆ ಸರಕಾರಿ ಶಾಲೆಯ ಅತಿಥಿ ಶಿಕ್ಷಕಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಜಯಪುರ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಹಲ್ಲೆಗೊಳಗಾದ ಶಿಕ್ಷಕಿ ಅಪೂರ್ವ(42)ರ ಸಂಬಂಧಿಕನೇ ಆಗಿರುವ ಭವಿತ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೇಮ ವೈಫಲ್ಯವೇ ಹಲ್ಲೆಗೆ ಕಾರಣ ಎಂದು ತಿಳಿದು ಬಂದಿದೆ.

ಭವಿತ್ ಶಿಕ್ಷಕಿ ಅಪೂರ್ವರನ್ನು ಪ್ರೀತಿಸುತ್ತಿದ್ದು, ಅಪೂರ್ವ ಪ್ರೀತಿಯನ್ನು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಭವಿತ್ ಮಂಗಳವಾರ ಸಂಜೆ ಅಪೂರ್ವ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ದಾರಿಮಧ್ಯೆ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾನೆ. ಅಪೂರ್ವರನ್ನು ಅಡಿಕೆಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅಪೂರ್ವ ಪ್ರಜ್ವಾಹೀನ ಸ್ಥಿತಿಗೆ ತಲುಪಿದ್ದರು. ಸ್ಥಳೀಯರು ಗಮನಿಸಿ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಕ್ಷಕಿಯನ್ನು ದಾಖಲಿಸಲಾಗಿದೆ.

ಹಲ್ಲೆ ಬಳಿಕ ಆರೋಪಿ ನಾಪತ್ತೆಯಾಗಿದ್ದು, ಬುಧವಾರ ಆತನನ್ನು ಬಂಧಿಸಲಾಗಿದೆ.

Vishwa News 24

Recent Posts

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 hour ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

1 hour ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

23 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

24 hours ago