Featured

ಚಿಕ್ಕಮಗಳೂರು : ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ಅಜರ್ ಗೆ ಮೂರು ವರ್ಷ ಜೈಲು ಶಿಕ್ಷೆ – Vishwanews24

ಚಿಕ್ಕಮಗಳೂರು : ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿ ಅಜರ್ ಗೆ ಮೂರು ವರ್ಷ ಜೈಲು ಶಿಕ್ಷೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶ್ರೀಗಳಿಗೆ ಅವಮಾನ ಮಾಡಿದವನಿಗೆ ಜೈಲು ಶಿಕ್ಷೆಯಾಗಿದೆ. ಶೃಂಗೇರಿಯ ಶಾರದಾ ಪೀಠದ ಭಾರತೀತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಕಮೆಂಟ್ ಹಾಕಿದ್ದ ಮುನ್ನ ಅಜರ್ ಎಂಬಾತನಿಗೆ ಇಂದು (ಮಂಗಳವಾರ) ಶೃಂಗೇರಿಯ ನ್ಯಾಯಾಲಯ ದಂಡದ ಜೊತೆಗೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಶೃಂಗೇರಿ ಶಾರದಾಪೀಠದ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ವಿರುದ್ಧವಾಗಿ ಅವಹೇಳನಕಾರಿಯಾಗಿ ಫೇಸ್ಬುಕ್ ಪೇಜ್ ಒಂದರಲ್ಲಿ ಪೋಸ್ಟ್ ಹಾಕಿದ್ದ ಮುನ್ನಾ ಅಜರ್ ಎಂಬುವವನಿಗೆ ಶೃಂಗೇರಿಯ ಜೆ.ಎಂ.ಎಫ್.ಸಿ ನ್ಯಾಯಾಲಯವು ಮೂರುವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 3300 ರೂಪಾಯಿಗಳ ದಂಡವನ್ನು ವಿಧಿಸಿ ಆದೇಶಿಸಿದೆ. 2015 ರ ನವೆಂಬರ್ 19 ರಂದು ಫೇಸ್ಬುಕ್ ನಲ್ಲಿ ಜಗದ್ಗುರುಗಳ ಕುರಿತಾಗಿ ಮುನ್ನಾ ಅಜರ್ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ, ಈ ಕುರಿತಾಗಿ ಶೃಂಗೇರಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಶೃಂಗೇರಿ ಮಠದ ಹಾಗೂ ಶ್ರೀಗಳ ಭಕ್ತರು ಅನೇಕ ಸಂಖ್ಯೆಯಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದರು. ಆರೋಪಿಯನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದರು.

ಪ್ರಕರಣದ ಹಿನ್ನೆಲೆ 
ಶೃಂಗೇರಿ ಹಿಂದೂಸ್ (ಕರ್ನಾಟಕ ಹಿಂದೂಸ್) ಎಂಬ ಫೇಸ್ಬುಕ್ ಪೇಜ್ ನಲ್ಲಿ ಶೃಂಗೇರಿ ಶ್ರೀ ಮಠದ ಗುರುಪರಂಪರೆ ಕುರಿತು ಮಾಹಿತಿ ನೀಡುವ ಪೋಸ್ಟ್ ಒಂದನ್ನು ಹಾಕಲಾಗಿತ್ತು. ಅದರಲ್ಲಿ ಶೃಂಗೇರಿ ಶ್ರೀಗಳ ಫೋಟೋ ಸಹ ಇತ್ತು. ಮುನ್ನ ಅಜರ್ ಎಂಬ ಕಿಡಿಗೇಡಿ ಆ ಪೋಸ್ಟ್ ಗೆ ಅವ್ಯಾಚ್ಯ ಪದಗಳನ್ನು ಬಳಸಿ ಆಕ್ಷೇಪಾರ್ಹ ಕಮೆಂಟ್ ಗಳನ್ನು ಹಾಕಿದ್ದನ್ನು, ಈ ಕುರಿತು ಭಕ್ತ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಶೃಂಗೇರಿಯಲ್ಲಿ ಪ್ರತಿಭಟನೆ ಸಹ ನಡೆದಿತ್ತು.

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಕೆಲವೇ ದಿನಗಳಲ್ಲಿ ಹುಬ್ಬಳ್ಳಿ ಮೂಲಕ ಆರೋಪಿ ಮುನ್ನ ಅಜರ್ ಎಂಬುವವನನ್ನು ಹೆಡೆಮುರಿ ಕಟ್ಟಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಧೀರ್ ಹೆಗ್ಡೆ ನೇತೃತ್ವದ ತನಿಖಾ ತಂಡ ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.ಪ್ರಸ್ತುತ ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ ಹಾಗೂದಂಡವನ್ನು ವಿಧಿಸಿ ಶೃಂಗೇರಿಯ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ತೀರ್ಪು ಪ್ರಕಟಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು 2015 ರಲ್ಲಿ ಶೃಂಗೇರಿ ಠಾಣೆಯ ವೃತ್ತನಿರೀಕ್ಷಕರಾಗಿದ್ದ ಸುಧೀರ್ ಎಂ. ಹೆಗ್ಡೆ ನಡೆಸಿ ಆರೋಪಿಯನ್ನು ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಯ ವಿರುದ್ಧವಾಗಿ ವಕೀಲೆ ಹರೀಣಾಕ್ಷಿವಾದ ಮಂಡನೆ ನಡೆಸಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

19 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago