Featured

ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ  – vishwanews24

ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ 2 ಲಕ್ಷ ರೂ. ಸ್ವೀಕರಿಸುತ್ತಿದ್ದ ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಚಿಕ್ಕಮಗಳೂರು ತಾಲೂಕಿನ ಸರ್ವೇಯರ್‌ಗಳಾದ ದೊರೆರಾಜ್ ಮತ್ತು ರಂಗನಾಥ್ ಲೋಕಾಯುಕ್ತ ಬಲೆಗೆ ಬಿದ್ದವರು.

ಚಿಕ್ಕಮಗಳೂರು ನಗರದ ಹೊರವಲಯದ ಇಂದಾವರ ಗ್ರಾಮದ ಧರಣೇಶ್ ಅವರು ತಮ್ಮ ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡುವಂತೆ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಈ ವೇಳೆ ಇಬ್ಬರು ಸರ್ವೇಯರ್‌ಗಳು 10 ಲಕ್ಷ ಲಂಚ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಕುರಿತು ಧರಣೇಶ್ ಅವರು ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ತಮ್ಮ ಖಾಸಗಿ ಕಚೇರಿಯಲ್ಲಿ 2 ಲಕ್ಷ ರೂ.ಮುಂಗಡ ಹಣ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಸರ್ವೇಯರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್‌ಪಿ ಪಿ. ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ನಡೆಯುತ್ತಿದೆ.

Vishwa News 24

Recent Posts

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ – vishwanews24

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ…

48 seconds ago

ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ…

14 minutes ago

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ – vishwanews24

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ…

23 minutes ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ – vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ…

36 minutes ago

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್ – vishwanews24

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್ ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್‌ ಬ್ಯಾನ್‌ ಮಾಡಿ…

41 minutes ago

ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ  ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ…

55 minutes ago