Featured

ಚಿಕ್ಕಮಗಳೂರು: ಹಳ್ಳದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ  SDRF ತಂಡ ಆಗಮನ – Vishwanews24

ಚಿಕ್ಕಮಗಳೂರು: ಹಳ್ಳದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ  SDRF ತಂಡ ಆಗಮನ

ಚಿಕ್ಕಮಗಳೂರು: ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ.

ಸೋಮವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ಹೋಗುವಾಗ ಕಾಲು ಕೆಸರಾಯಿತೆಂದು ಹಳ್ಳದಲ್ಲಿ ತೊಳೆದುಕೊಳ್ಳುವ ವೇಳೆ ಆಯಾತಪ್ಪಿ ಬಿದ್ದ ಒಂದನೇ ತರಗತಿ ಬಾಲಕಿ ಸುಪ್ರಿತಾ ನೀರಿನಲ್ಲಿ ಕೊಚ್ಚಿ ಹೋಗಿದ್ದಳು. ಕಳೆದ ಎರಡು ದಿನಗಳಿಂದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯ ಈಜು ಪಟುಗಳು 15 ಕಿ.ಮೀ ಉದ್ದದ ಹಳ್ಳದಲ್ಲಿ ಬಾಲಕಿಗಾಗಿ ಹುಡುಕಾಡಿದರು. ಬಾಲಕಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಿಂದ 20 ಜನರ ಎಸ್‌.ಡಿ.ಆರ್.ಎಫ್. ತಂಡ ಆಗಮಿಸಿದೆ. ಎಸ್‌.ಡಿ.ಆರ್.ಎಫ್. ತಂಡದ ಜೊತೆ ಉಡುಪಿ ಜಿಲ್ಲೆಯ ಮಲ್ಪೆಯಿಂದ ಮುಳುಗು ತಜ್ಞ ಈಶ್ವರ್ ಕೂಡ ಆಗಮಿಸಿದ್ದಾರೆ.

ಎಸ್‌.ಡಿ.ಆರ್.ಎಫ್ ಮುಳುಗುತಜ್ಞರ ಜೊತೆ 35ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ 20ಕ್ಕೂ ಹೆಚ್ಚು ಈಜು ಪಟುಗಳು ಸಾಥ್ ನೀಡಿದ್ದಾರೆ. ಇಂದು ಬಾಲಕಿಯ ಪತ್ತೆಗೆ ಸುಮಾರು 60 ರಿಂದ 70 ಜನ ಕಾರ್ಯಾಚರಣೆಗೆ ಇಳಿದಿದ್ದಾರೆ. ಒಂದು ಸುತ್ತು ಹಳ್ಳ ಹರಿಯುವ ಮಾರ್ಗದಲ್ಲಿ ಹೋಗಿ ಬಂದಿರುವ ಎಸ್.ಡಿ.ಆರ್.ಎಫ್. ತಂಡ ಹಾಗೂ ಮುಳುಗುತಜ್ಞರು ಇದೀಗ ಬಾಲಕಿ ಬಿದ್ದ ಜಾಗದಿಂದ 15 ಕಿ.ಮೀ. ಕಾರ್ಯಾಚರಣೆಗೆ ಮುಂದಾಗಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

7 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

8 hours ago