ಚಿಕ್ಕಮಗಳೂರಿನ ಹಿಟ್ & ರನ್ ಕೇಸ್ ಬಗ್ಗೆ ಕಾಮಿಡಿ ನಟ ಚಂದ್ರಪ್ರಭಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಶೂಟಿಂಗ್ ಮುಗಿಸಿಕೊಂಡು ಬರುತ್ತಿದ್ದೆ, ಕುಡಿದು ಬೈಕ್ ಸವಾರನೇ ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ನಾನೇ ಅವರನ್ನು ಆಸ್ಪತ್ರೆಗೆ ದಾಖಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಗಿಚ್ಚಿ ಗಿಲಿ ಗಿಲಿʼ ವಿನ್ನರ್ ಚಂದ್ರಪ್ರಭಾ ಅವರು ಹಿಟ್ & ರನ್ ಕೇಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಅಪಘಾತ ಮಾಡಿ ಮಾನವೀಯತೆಗೂ ಕಾರು ನಿಲ್ಲಿಸದೇ ನಟ ಪರಾರಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಈ ಅಪಘಾತ ಪ್ರಕರಣ ನಡೆದಿದ್ದು, ಬೈಕ್‌ನಲ್ಲಿದ್ದ ಯುವಕ ಮಾಲ್ತೇಶ್‌ಗೆ ಗುದ್ದಿ ನಟ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿತ್ತು.
ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಮಾಲ್ತೇಶ್‌ಗೆ ಏನಾಯಿತು ಎಂದು ನೋಡುವ ಸೌಜನ್ಯ ಕೂಡ ತೋರಿಲ್ಲ ಎಂದು ಹೇಳಲಾಗಿತ್ತು. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…