ಚಿಕ್ಕಮಗಳೂರು: 9ನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಖಾಸಗಿ ಶಾಲೆಯ ಹಾಸ್ಟೆಲ್‌ನಲ್ಲಿ ನಡೆದಿದೆ.
9ನೇ ತಗರತಿ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸ್ (15) ಮೃತ ವಿದ್ಯಾರ್ಥಿ. ಬಾಲಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾಲೆಯ 3ನೇ ಮಹಡಿಯಲ್ಲಿದ್ದ ಹಾಸ್ಟೆಲ್‌ನ ಮೇಲ್ಛಾವಣಿಯ ಕಬ್ಬಿಣದ ರಾಡಿಗೆ ಸೀರೆಯಿಂದ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾನೆ.
ಕಳೆದ ರಾತ್ರಿ ಊಟ ಮಾಡಿ ಸ್ನೇಹತರ ಜೊತೆಯೇ ಮಲಗಿದ್ದ ಶ್ರೀನಿವಾಸ್ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಮಲಗಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ತಂದೆ ಸರ್ಕಾರಿ ನೌಕರರಾಗಿದ್ದು, ಕೊಪ್ಪ ತಾಲೂಕಿನಲ್ಲೇ ಕೆಲಸ ಮಾಡುತ್ತಿದ್ದರು. ಶಾಲೆ ಮನೆಯಿಂದ ತುಸು ದೂರದಲ್ಲೇ ಇತ್ತು. ಮೃತ ಬಾಲಕ ನಿತ್ಯ ಓಡಾಕೊಂಡಿದ್ದನು. ಕಳೆದ ಒಂದು ತಿಂಗಳ ಹಿಂದೆ ಮೃತ ಶ್ರೀನಿವಾಸ್ ತಂದೆಗೆ ಕೊಪ್ಪದಿಂದ ಅಜ್ಜಂಪುರಕ್ಕೆ ವರ್ಗಾವಣೆಯಾಗಿತ್ತು. ಹಾಗಾಗಿ, ಶ್ರೀನಿವಾಸ್‌ನನ್ನ ಹಾಸ್ಟೆಲ್‌ಗೆ ಸೇರಿಸಿದ್ದರು.
ಒಂದು ತಿಂಗಳಿನಿಂದ ಶಾಲೆಯ ಹಾಸ್ಟೆಲ್‌ನಲ್ಲಿದ್ದ ಶ್ರೀನಿವಾಸ್ ಮಂಗಳವಾರ ಬೆಳಗ್ಗಿನ ಜಾವ ಹಾಸ್ಟೆಲ್‌ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…