ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ೨೦೦೮ ರಿಂದ ನಡೆಸಿಕೊ0ಡು ಬಂದ ಚಿಟ್ಟಾಣಿ ಯಕ್ಷಗಾನ ಸಪ್ತಾಹ ಇಂದು (೨೮-೧೧-೨೦೨೧) ಆರಂಭವಾಗಿ ೦೪-೧೨-೨೦೨೧ರ ವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ.
ಇಂದು ಸಂಜೆ ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. ವೀರಾಂಜನೇಯ ಯಕ್ಷಮಿತ್ರ ಮಂಡಳಿ ಮತ್ತು ಅತಿಥಿ ಕಲಾವಿದರ ಸಹಯೋಗದಲ್ಲಿ ಅನುಕ್ರಮವಾಗಿ ಸತ್ಯಹರೀಶ್ಚಂದ್ರ, ಪ್ರಮಿಳಾರ್ಜುನ-ಬಭ್ರುವಾಹನ, ಚಿತ್ರಾಕ್ಷಿ ಕಲ್ಯಾಣ, ಶೂರ್ಪನಖಾ ವಿವಾಹ-ಪೌಂಡ್ರಕ ವಧೆ, ಶ್ರೀದೇವಿ ಬನಶಂಕರಿ, ಯಕ್ಷಲೋಕ ವಿಜಯ ಮತ್ತು ಪೃಥುಯಜ್ಞ ಪ್ರಸಂಗಗಳು ಪ್ರದರ್ಶನಗೊಳ್ಳಲಿವೆ. ಪ್ರತೀ ದಿನ ಸಂಜೆ ೬.೩೦ ಗಂಟೆಗೆ ಪ್ರದರ್ಶನ ಆರಂಭವಾಗುತ್ತದೆ.
ದಿನಾ0ಕ ೦೪-೧೨-೨೦೨೧ರಂದು ಪ್ರಶಸ್ತಿ ಪ್ರದಾನ ನಡೆಯಲಿದ್ದು ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಕಲಾವಿದ ರ‍್ಗೋಡು
ಮೋಹನದಾಸ ಶೆಣೈ ಅವರಿಗೆ, ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದೆ ಮೂಕಾಂಬಿಕಾ ವಾರಂಬಳ್ಳಿಯವರಿಗೆ ಪ್ರದಾನ ಮಾಡಲಾಗುವುದೆಂದು ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…