ಚಿತ್ರದುರ್ಗ : ಕಾಂಗ್ರೆಸ್ ಸರ್ಕಾರ ಬಂದಿದೆ ನಾವು ಕರೆಂಟ್ ಬಿಲ್ ಕಟ್ಟಲ್ಲ : ‘ಬೆಸ್ಕಾಂ’ ಮೀಟರ್ ರೀಡರ್ ಗೆ ಗ್ರಾಮಸ್ಥರ ಅವಾಜ್ – Vishwanews24

Featured, ರಾಜ್ಯ ನ್ಯೂಸ್

ಚಿತ್ರದುರ್ಗ : ಕಾಂಗ್ರೆಸ್ ಸರ್ಕಾರ ಬಂದಿದೆ ನಾವು ಕರೆಂಟ್ ಬಿಲ್ ಕಟ್ಟಲ್ಲ : ‘ಬೆಸ್ಕಾಂ’ ಮೀಟರ್ ರೀಡರ್ ಗೆ ಗ್ರಾಮಸ್ಥರ ಅವಾಜ್

ಚಿತ್ರದುರ್ಗ : ಕಾಂಗ್ರೆಸ್ ಸರ್ಕಾರ ಬಂದಿದೆ ನಾವು ಕರೆಂಟ್ ಬಿಲ್ಲ ಕಟ್ಟಲ್ಲ ಎಂದು ಗ್ರಾಮಸ್ಥರು ಬೆಸ್ಕಾಂ ಮೀಟರ್ ರೀಡರ್ ಗೆ ಅವಾಜ್ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿತ್ತು, ಈ ಹಿನ್ನೆಲೆ ಗ್ರಾಮದ ಜನರು ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ಜನರು ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದು, ಮೀಟರ್ ರೀಡರ್ ಗೆ ಅವಾಜ್ ಹಾಕಿದ್ದಾರೆ. ಆದರೆ ಆದೇಶ ಬರುವವರೆಗೂ ಬಿಲ್ ಕಟ್ಟಲೇಬೇಕು ಎಂದು ಹೇಳಿದರೂ ಕೂಡ ಜನರು ಕೇಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿಂದೆ ಮೇ 15ರಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಜೂನ್ 1ರಿಂದ ಕರೆಂಟ್ ಬಿಲ್ ಕಟ್ಟುವಂತಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು ತಿಳಿಸಿದ್ದರು, ಈಗ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿರುವುದರಿಂದ ಜನತೆ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ.

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣ ಸಾವು – Vishwanews24

Leave a Reply