ಚಿತ್ರದುರ್ಗ : ಕಾಂಗ್ರೆಸ್ ಸರ್ಕಾರ ಬಂದಿದೆ ನಾವು ಕರೆಂಟ್ ಬಿಲ್ಲ ಕಟ್ಟಲ್ಲ ಎಂದು ಗ್ರಾಮಸ್ಥರು ಬೆಸ್ಕಾಂ ಮೀಟರ್ ರೀಡರ್ ಗೆ ಅವಾಜ್ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿತ್ತು, ಈ ಹಿನ್ನೆಲೆ ಗ್ರಾಮದ ಜನರು ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.
ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ಜನರು ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದು, ಮೀಟರ್ ರೀಡರ್ ಗೆ ಅವಾಜ್ ಹಾಕಿದ್ದಾರೆ. ಆದರೆ ಆದೇಶ ಬರುವವರೆಗೂ ಬಿಲ್ ಕಟ್ಟಲೇಬೇಕು ಎಂದು ಹೇಳಿದರೂ ಕೂಡ ಜನರು ಕೇಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಿಂದೆ ಮೇ 15ರಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಜೂನ್ 1ರಿಂದ ಕರೆಂಟ್ ಬಿಲ್ ಕಟ್ಟುವಂತಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು ತಿಳಿಸಿದ್ದರು, ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದರಿಂದ ಜನತೆ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …