Featured

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ

15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶುಕ್ರವಾರ(ಆ.21) ನಡೆದಿದೆ.

ಮೃತರನ್ನು ಬಸ್ ಚಾಲಕ, ನಿರ್ವಾಹಕ ಹಾಗೂ ಓರ್ವ ನರ್ಸಿಂಗ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಿಕೆರೆಯಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಳೆದ ಆಗಸ್ಟ್ 16ರಂದು ಗೋವಾ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಗೋವಾದಿಂದ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಚಾಲಕನಿಗೆ ಆವರಿಸಿದ್ದ ನಿದ್ರೆಯ ಮಂಪರೇ ಈ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬಸ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಂಜಿತ್ ಕುಮಾರ್ ಬಂಡಾರೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Vishwa News 24

Recent Posts

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

15 minutes ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

34 minutes ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

51 minutes ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

1 hour ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

15 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

1 day ago