ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ 14 ತಿಂಗಳಿಂದ ಇದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಮುರುಘಾ ಶ್ರೀ ಅವರಿಗೆ ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಸಂಬಂಧ ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬುಧವಾರ ಮಧ್ಯಾಹ್ನ ಬಿಡುಗಡೆಗೆ ಆದೇಶ ಮಾಡಿತ್ತು.
ಇನ್ನು ಸಂಜೆ ನ್ಯಾಯಾಲಯದ ಆದೇಶ ಪ್ರತಿ ತಲುಪುವುದು ವಿಳಂಭವಾಗಿದ್ದ ಕಾರಣಕ್ಕೆ ಇಂದು ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಮಧ್ಯಾಹ್ನ 12.40ಕ್ಕೆ ಬಿಡುಗಡೆಯಾಗಿದ್ದಾರೆ.
ಷರತ್ತು ವಿಧಿಸಿದ ಹೈಕೋರ್ಟ್
ಜೈಲಿನಿಂದ ಬಿಡುಗಡೆಗೊಂಡಿರುವ ಮುರುಘಾ ಶರಣರಿಗೆ ಕೋರ್ಟ್ ಕೆಲವು ಷರತ್ತು ವಿಧಿಸಿದ್ದು ಅದರಂತೆ ವಿಚಾರಣೆ ಮುಗಿಯುವವರೆಗೂ ಶ್ರೀಗಳು ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…