Featured

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶ್ರೀ‌ ಬಿಡುಗಡೆ – vishwanews24

ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶ್ರೀ‌ ಬಿಡುಗಡೆ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ 14 ತಿಂಗಳಿಂದ ಇದ್ದ ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಮುರುಘಾ ಶ್ರೀ ಅವರಿಗೆ ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ‌ ಸಂಬಂಧ ವಿಚಾರಣಾ ನ್ಯಾಯಾಲಯವಾದ ಚಿತ್ರದುರ್ಗದ ಎರಡನೇ ಹೆಚ್ಚುವರಿ‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಇಬ್ಬರ ಶ್ಯೂರಿಟಿ ಮತ್ತಿತರೆ ಅಂಶಗಳನ್ನು ಪರಿಶೀಲಿಸಿ ಬುಧವಾರ ಮಧ್ಯಾಹ್ನ ಬಿಡುಗಡೆಗೆ ಆದೇಶ ಮಾಡಿತ್ತು.

ಇನ್ನು ಸಂಜೆ ನ್ಯಾಯಾಲಯದ ಆದೇಶ ಪ್ರತಿ ತಲುಪುವುದು ವಿಳಂಭವಾಗಿದ್ದ ಕಾರಣಕ್ಕೆ ಇಂದು ಬೆಳಗ್ಗೆ ಜಿಲ್ಲಾ ಕಾರಾಗೃಹದಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಸಿ ಮಧ್ಯಾಹ್ನ 12.40ಕ್ಕೆ ಬಿಡುಗಡೆಯಾಗಿದ್ದಾರೆ.

ಷರತ್ತು ವಿಧಿಸಿದ ಹೈಕೋರ್ಟ್
ಜೈಲಿನಿಂದ ಬಿಡುಗಡೆಗೊಂಡಿರುವ ಮುರುಘಾ ಶರಣರಿಗೆ ಕೋರ್ಟ್ ಕೆಲವು ಷರತ್ತು ವಿಧಿಸಿದ್ದು ಅದರಂತೆ ವಿಚಾರಣೆ ಮುಗಿಯುವವರೆಗೂ ಶ್ರೀಗಳು ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್‌ ಅನ್ನು ಕೋರ್ಟ್‌ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago