ಚಿತ್ರದುರ್ಗ : ಗಂಡನನ್ನ ಬಿಟ್ಟು ಖಾದರ್‌ನನ್ನು ಪ್ರೀತಿಸಿ ಮದುವೆಯಾಗಿದ್ದಳು ಉಮಾ. ಆದರೆ ಮುಂದೆ ಪ್ರತಿನಿತ್ಯ ಚಿತ್ರಹಿಂಸೆ. ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಆಕೆಯನ್ನ ಪೀಡಿಸುತ್ತಿದ್ದ ಅಬ್ದುಲ್ ಖಾದರ್. ಈ ಪ್ರಕರಣವು ಲವ್ ಜಿಹಾದ್ ಎನ್ನುವ ಆರೋಪ ಕೇಳಿಬಂದಿದೆ.
ಚಿತ್ರದುರ್ಗ ನಗರದ ನೆಹರು ಬಡಾವಣೆಯಲ್ಲಿ ವಾಸವಿರುವ ಶಿವಮೊಗ್ಗ ಮೂಲದ ಉಮಾ ಮತ್ತು ಚಿತ್ರದುರ್ಗದ ಅಬ್ದುಲ್ ಖಾದರ್ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವಾಗ ಪರಿಚಯವಾಗಿದ್ದರು. ಪರಿಚಯ ಪ್ರೀತಿಗೆ ತಿರುಗಿ ಕಳೆದ ಎರಡು ವರ್ಷಗಳ ಹಿಂದೆ ಮದುವೆ ಆಗಿದ್ದರು. ವಿವಾಹಿತೆ ಆಗಿದ್ದ ಉಮಾ ಮೊದಲ ಗಂಡನಿಂದ ವಿಚ್ಛೇದನ ಪಡೆದ ಬಳಿಕ ಖಾದರ್ ಉಮಾಳನ್ನು ಮದುವೆ ಆಗಿದ್ದಳು.
ಮದುವೆಯಾಗಿ ವರ್ಷದ ಬಳಿಕ ಉಮಾಗೆ ಅನಾರೋಗ್ಯದಿಂದ ಎರಡು ಕಾಲುಗಳು ನಿಷ್ಕ್ರಿಯಗೊಂಡು ಹಾಸಿಗೆ ಹಿಡಿದಿದ್ದರು. ಈ ಮಧ್ಯೆ ಕಳೆದ ನಾಲ್ಕು ತಿಂಗಳಿಂದ ಅಬ್ದುಲ್ ಖಾದರ್ ಉಮಾಗೆ ಕಿರುಕುಳ ನೀಡುತ್ತಾ ಧರ್ಮ ನಿಂದನೆ ಮಾಡಿ, ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಹಲ್ಲೆ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಬ್ದುಲ್ ಖಾದರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸಿಗೆ ಹಿಡಿದ ಉಮಾಳಿಗೆ ಪತಿ ಖಾದರ್ ಉಸಿರುಗಟ್ಟಿಸಿ ಹತ್ಯೆ ಮಾಡುವುದಾಗಿ ಬೆದರಿಸುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಕಳೆದ 6-7ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಉಮಾಳಿಗೆ ಖಾದರ್ ಚಿತ್ರ ವಿಚಿತ್ರವಾಗಿ ಕಿರುಕುಳ ನೀಡುತ್ತಿದ್ದು, ನ.16ರ ಸಂಜೆ ಕುಡಿದು ಬಂದು ಪತ್ನಿಯ ಗುಪ್ತಾಂಗಕ್ಕೆ ಕಾಲಿನಿಂದ ಜಾಡಿಸಿ ಒದ್ದಿದ್ದಾನೆ. ಈ ವೇಳೆ ಪೊಲೀಸ್ ಸ್ಟೇಶನ್‌ಗೆ ದೂರು ನೀಡುವುದಾಗಿ ಉಮಾ ಹೇಳಿದಾಗ ಮತ್ತಷ್ಟು ತೀವ್ರವಾಗಿ ಹಲ್ಲೆ ನಡೆಸಿದ್ದನಂತೆ. ಉಮಾ ತನ್ನ ದೂರದ ಸಂಬಂಧಿ ವಿಶ್ವನಾಥ್ ಎಂಬುವವರಿಗೆ ನಡೆದ ವಿಚಾರವನ್ನೆಲ್ಲ ಹೇಳಿ, ಅವರ ಮೂಲಕ ಪೊಲೀಸರ ನೆರವು ಪಡೆದಿದ್ದಾರೆ. ಗಂಭೀರ ಗಾಯಗೊಂಡ ಉಮಾರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೈಹಿಕ, ಮಾನಸಿಕ ಹಿಂಸೆ, ಜಾತಿ ನಿಂದನೆ, ಮತಾಂತರ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಹಿಂದೆ ಲವ್ ಜಿಹಾದ್ ಸಂಚಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…