ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಟ್ರಾವೆಲ್ಸ್‌ನ ಸ್ಲೀಪರ್ ಬಸ್‌ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಈ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು
ಅಪಘಾತದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಸಂಪೂರ್ಣ ವರದಿ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು ನೀಡಲಾಗುವುದು. ಇದರ ಜೊತೆಗೆ, ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಹೀಗಾಗಿ ಮೃತರ ಕುಟುಂಬಗಳಿಗೆ ಒಟ್ಟು 7 ಲಕ್ಷ ರೂಪಾಯಿ ನೆರವು ದೊರೆಯಲಿದೆ.
ಗಾಯಾಳುಗಳಿಗೆ ತಲಾ 50 ಸಾವಿರ ಘೋಷಣೆ
ಗಾಯಾಳುಗಳ ಸ್ಥಿತಿಯನ್ನು ಗಮನಿಸಿ ರಾಜ್ಯ ಸರ್ಕಾರದಿಂದ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಹಿರಿಯೂರು, ಚಿತ್ರದುರ್ಗ ಮತ್ತು ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ಬರ್ನ್ ವಾರ್ಡ್‌ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…