Featured

ಚಿತ್ರದುರ್ಗ ಭೀಕರ ರಸ್ತೆ ಅಫಘಾತ : ‘ಮಗಳು ಜಾನಕಿ’ ಖ್ಯಾತಿಯ ನಟಿ ಶೋಭಾ ಸಾವು -Vishwanews24

ಚಿತ್ರದುರ್ಗ: ಖ್ಯಾತ ಕಿರುತೆರೆ ನಟಿ ಶೋಭಾ ಎಮ್.ವಿ ನಿನ್ನೆ ಸಂಭವಿಸಿದ್ದ ಭೀಕರ ರಸ್ತೆ ಅಫಘಾತದಲ್ಲಿ ಸಾವನಪ್ಪಿದ್ದಾರೆ. ಚಿತ್ರದುರ್ಗದ ಹೊರವಲಯ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಶೋಭಾ ಸೇರಿದಂತೆ ಐವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಕಾರಿನಲ್ಲಿ ಒಟ್ಟು ಎಂಟು ಜನ ಪ್ರಯಾಣಿಸುತ್ತಿದ್ದು ಇವರೆಲ್ಲಾ ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಬಾಗಲಕೋಟೆ ಜಿಲ್ಲೆಯ ಬದಾಮಿ ಬನಶಂಕರಿ ದೇವಾಲಯಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ.

ಸಹಜ ಮತ್ತು ನೈಜ ಅಭಿನಯದ ಮೂಲಕವೆ ವೀಕ್ಷಕರ ಮನಗೆದ್ದಿದ್ದ ಶೋಭಾ ಧಾರಾವಾಹಿಯ ಪಾತ್ರಧಾರಿಯಂತೆ, ನಿಜ ಜೀವನದಲ್ಲೂ ಅತ್ಯಂತ ಸಜ್ಜನ ಮತ್ತು ಸೌಮ್ಯ ಸ್ವಭಾವದವರಾಗಿದ್ದರು. ಮಗಳು ಜಾನಕಿ ಧಾರಾವಾಹಿ ಸೇರಿದಂತೆ ಅನೇಕ ಚಲನಚಿತ್ರಗಳಲ್ಲಿ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ವೀಕ್ಷಕರಿಗೆ ಮನರಂಜನೆ ನೀಡಿದ್ದಾರೆ ಶೋಭಾ.

ಶೋಭಾ ಅವರ ನಿಧನಕ್ಕೆ ಮಗಳು ಜಾನಕಿ ಧಾರಾವಾಹಿ ತಂಡ ಮತ್ತು ಅಭಿಮಾನಿ ಬಳಗ ಸಂತಾಪ ಸೂಚಿಸಿದೆ. ಶೋಭಾ ಅವರ ಅಗಲಿಗೆ ತಂಡಕ್ಕೆ ದೊಡ್ಡ ನಷ್ಟ ಎಂದು ಧಾರಾವಾಹಿ ತಂಡ ಹೇಳಿಕೊಂಡಿದೆ. ಅಲ್ಲದೆ ಈ ಧಾರಾವಾಹಿಯ ಅತೀ ದೊಡ್ಡ ಫೇಸ್ ಬುಕ್ ಗ್ರೂಪ್ ನವರು ಕೂಡ ಶುಭಾ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಮಂಗಳಕ್ಕ ಆಗಿ ಧಾರಾವಾಹಿಯಲ್ಲಿ ಎಲ್ಲರ ಅಚ್ಚುಮೆಚ್ಚಾಗಿದ್ದರು ಶೋಭಾ. ಮಗಳು ಜಾನಕಿ ಧಾರಾವಾಹಿ ನಿರ್ದೇಶಕ ಟಿ ಎನ್ ಸೀತಾರಾಮ್ ಅವರ ಸಾರಥ್ಯದಲ್ಲಿ ಮೂಡಿ ಬರುತ್ತಿದೆ.

ಗಾಯಾಳುಗಳಲ್ಲಿ ಇಬ್ಬರು ಮಕ್ಕಳೂ ಸೇರಿದ್ದು ಎಲ್ಲಾ ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳಕ್ಕೆ ಚಿತ್ರದುರ್ಗ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago