ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಸೋಮವಾರ ನಸುಕಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಗೀತಾ (32), ತಾಯಿ ಶಾರದಾ (60) ಹಾಗೂ ಮಗಳು ಧ್ರುತಿ (5) ಮೃತಪಟ್ಟವರು.
ನಾಗೇಶ (65), ದಯಾನಂದ (66), ಸುಧೀಂದ್ರ (35) ಗಾಯಗೊಂಡಿದ್ದು, ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಕುಟುಂಬದ ಆರು ಜನರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಜೋಡಿ ಶ್ರೀರಂಗಾಪುರದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಅಪಘಾತ ಸಂಭವಿಸಿರಬಹುದು ಎಂದು ಹೊಸದುರ್ಗ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…