ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರುದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಬಸ್ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಅಪಘಾತದ ವೇಳೆ ಬಸ್‌ನಲ್ಲಿದ್ದ ಹಲವರು ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ಬಸ್ ಚಾಲಕ ಮತ್ತು ನಿರ್ವಾಹಕರು ಬಸ್‌ನಿಂದ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕನು ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಬಸ್‌ನಲ್ಲಿ ಒಟ್ಟು 29 ಪ್ರಯಾಣಿಕರು ಇದ್ದು, ಅವರಲ್ಲಿ 14 ಮಹಿಳೆಯರು ಹಾಗೂ 15 ಪುರುಷರು ಸೇರಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 21 ಮಂದಿಯನ್ನು ಹಿರಿಯೂರು ಹಾಗೂ ತುಮಕೂರು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಜಿಲ್ಲಾಧಿಕಾರಿಗಳು, ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…