ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಬಳಿ ನಡೆದಿದೆ.
ಬೆಳಗ್ಗಿನ ಜಾವ 5 ಗಂಟೆ ವೇಳೆ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪಾ ಹುಗರ್ (26), ರಮೇಶ್ (28), ಪ್ರಶಾಂತ್ ಹಟ್ಟಿ (36) ಸಾವನ್ನಪ್ಪಿದವರು. ಮೃತರೆಲ್ಲರೂ ಗದಗ ಜಿಲ್ಲೆಯ ಹುಯಿಗೊಳ ಗ್ರಾಮದವರು. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈರುಳ್ಳಿ ತುಂಬಿಕೊಂಡು ಬೆಂಗಳೂರಿಗೆ ಹೊರಟಿದ್ದ ಈಚರ್ ಲಾರಿಯೊಂದರ ಟೈರ್ ಸಿಡಿದು ಪಲ್ಟಿಯಾಗಿದೆ. ಆಗ ಲಾರಿಯ ಹಿಂಬದಿ ಬರುತ್ತಿದ್ದ ಕಾರು ಹಾಗೂ ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡು ಹಿರಿಯೂರು ತಾಲೂಕು ಆಸ್ಪತ್ರೆ ಸೇರಿದ್ದಾರೆ.
ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಈರುಳ್ಳಿ ಚೀಲಗಳು ಚೆಲ್ಲಾಪಿಲ್ಲಿಯಾಗಿದ್ದು, ರೈತರು ಕಷ್ಟಪಟ್ಟು ಬೆಳೆದ ಈರುಳ್ಳಿಯೆಲ್ಲಾ ರಸ್ತೆ ಪಾಲಾಗಿವೆ. ಒಂದರ ಹಿಂದೆ ಒಂದು ಲಾರಿ ಡಿಕ್ಕಿಯಾಗಿ ಎರಡು ಲಾರಿಗಳು ಹಾಗೂ ಕಾರು ಪಲ್ಟಿಯಾಗಿವೆ. ಆದರೆ ಆ ವಾಹನಗಳಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಭೀಕರ ಅಪಘಾತದ ಸ್ಥಳಕ್ಕೆ ಎಸ್‍ಪಿ ಜಿ ರಾಧಿಕಾ, ಡಿವೈಎಸ್‍ಪಿ ರೋಷರ್ ಜಮೀರ್, ಸಿಪಿಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಕೆಲಕಾಲ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…