ಬೆಳಗಾವಿ: ಬೈಕ್‌ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಚಿತ್ರ ನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬೈಲಹೊಂಗಲ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಆದರೆ ಅದೃಷ್ಟವಶಾತ್ ಯಾವುದೇ ಗುಂಡು ತಾಗದೆ ಶಿವರಂಜನ್ ಅಪಾಯದಿಂದ ಪಾರಾಗಿದ್ದಾರೆ.
ಬೈಲಹೊಂಗಲ ಪಟ್ಟಣದ ಹನುಮಂತ ದೇವಸ್ಥಾನದ ಬಳಿ ಶಿವರಂಜನ್ ಬೋಳಣ್ಣವರ ಅವರ ಹಳೆಯ ಮನೆ ಇದ್ದು, ಈ ಮನೆ ಬಳಿ ಘಟನೆ ನಡದಿದೆ. ಸುಮಾರು ಮೂರ್‍ನಾಲ್ಕು ಸುತ್ತು ಫೈರಿಂಗ್ ನಡೆಸಿ ದುಷ್ಕರ್ಮಿಗಳು ಕಾಲ್ಕಿತ್ತಿದ್ದಾರೆ. ಆದರೆ ಯಾವುದೇ ಗುಂಡು ತಗುಲದ ಕಾರಣ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಸಂಪೂರ್ಣ ಚಿತ್ರಣ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಹೋದರ ಸಂಬಂಧಿಯೇ ಇದನ್ನು ಮಾಡಿರಬಹುದು ಎಂದು ಶಂಕಿಸಲಾಗಿದ್ದು, ನಿಖರ ಮಾಹಿತಿ ತಿಳಿದು ಬಂದಿಲ್ಲ. ಶಿವರಂಜನ್ ಅವರನ್ನೂ ಪೊಲೀಸರು ಇದೀಗ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಬೈಲಹೊಂಗಲ ಪಟ್ಟಣದ ಸುತ್ತ ಪೊಲೀಸರು ನಾಕಾಬಂಧಿ ಹಾಕಿದ್ದು, ಸಂಶಯಾಸ್ಪದ ವಾಹನಗಳನ್ನು ತಪಾಸಣೆ ನಡೆಸಿಯೇ ಕಳುಹಿಸುತ್ತಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಲಿಂಗ ನಂದಗಾಂವಿ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…