ಉಡುಪಿ: ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಅಕಾಲಿಕ ಮರಣ ಹೊಂದಿದ ಚಿತ್ರನಟ ಹರೀಶ್ ರಾಯ್ ಅವರ ಅಂತ್ಯ ಸಂಸ್ಕಾರ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಉಡುಪಿಯಲ್ಲಿ ನೆರವೇರಿತು.
ಉಡುಪಿಯ ಅಂಬಲಪಾಡಿಯ ಮೂಲ ಮನೆಯಲ್ಲಿ ಅಂತಿಮ ವಿಧಿವಿಧಾನಗಳು ನಡೆದವು. ತುಳಸಿ ಕಟ್ಟೆ ಮುಂಭಾಗದಲ್ಲಿ ಅರ್ಚಕರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನಡೆಯಿತು. ಹರೀಶ್ ಆಚಾರ್ಯ ಆಪ್ತರು ಕುಟುಂಬದವರು ಅಂತಿಮ ವಿಧಿ ವಿಧಾನದಲ್ಲಿ ಭಾಗಿಯಾದರು. ಬಳಿಕ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಪಾರ್ಥಿವ ಶರೀರವನ್ನು ಉಡುಪಿಯ ಬೀಡಿನಗುಡ್ಡೆಯಲ್ಲಿರುವ ಹಿಂದು ರುದ್ರಭೂಮಿಗೆ ಕೊಂಡೊಯ್ಯಲಾಯಿತು. ನಟ ಹರೀಶ್ ರಾಯ್ ಮೃತದೇಹಕ್ಕೆ ಸಹೋದರ ಸತೀಶ್ ಹಾಗೂ ಪುತ್ರರಾದ ರೋನೆತ್ ರಾಯ್, ರೋಷನ್ ರಾಯ್ ಅಗ್ನಿಸ್ಪರ್ಶ ಮಾಡಿದರು.
ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಮಿಂಚಿದ್ದ ಹರೀಶ್ ರಾಯ್ ಪಂಚಭೂತಗಳಲ್ಲಿ ಲೀನವಾದರು. ಸಹೋದರ ಸಹೋದರಿಯರು ಅಂತಿಮ ನಮನ ಸಲ್ಲಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…